ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀನುಗಾರಿಕೆ: ಜಿಎಸ್‌ಟಿ ಕಡಿತ ಮಾಡಿ

Last Updated 17 ಜೂನ್ 2017, 7:08 IST
ಅಕ್ಷರ ಗಾತ್ರ

ಉಡುಪಿ: ಮೀನುಗಾರಿಕೆಗೆ ಬಳಸುವ ಬಲೆ, ಹಗ್ಗ ಮುಂತಾದ ಸಾಧನಗಳ ಮೇಲೆ ವಿಧಿಸಿರುವ ಶೇ12ರಷ್ಟು ತೆರಿಗೆಯನ್ನು (ಜಿಎಸ್‌ಟಿ) ಹಿಂದಕ್ಕೆ ಪಡೆಯುವಂತೆ ಮಲ್ಪೆ ಮೀನುಗಾರರ ಸಂಘ ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿತು.

ಮೀನುಗಾರಿಕೆ ಕೃಷಿಯ ಇಲಾಖೆಯ ಅಧೀನದಲ್ಲಿದ್ದರೂ ಕೃಷಿಗೆ ಸಿಗುವಷ್ಟು ಸವಲತ್ತು ಮೀನುಗಾರಿಕೆ ಸಿಗುತ್ತಿಲ್ಲ. ಮೀನುಗಾರರಿಗೂ ಕೃಷಿಕರಿಗೆ ನೀಡುವಂತೆ ಹೆಚ್ಚಿನ ಸವಲತ್ತು ನೀಡಬೇಕು. ಮಲ್ಪೆಯಲ್ಲಿ ಮೀನುಗಾರಿಕೆ ಮೂಲ ಭೂತ ಸೌಲಭ್ಯ ಕೇಂದ್ರ ಸ್ಥಾಪನೆ ಮಾಡಿ ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.

ಕುಮಟಾದ ತದಡಿಯಲ್ಲಿ ಸುಮಾರು ₹5 ಕೋಟಿ ವೆಚ್ಚದಲ್ಲಿ ಮೀನುಗಾರಿಕಾ ಸೌಲಭ್ಯ ಕೇಂದ್ರ ಆರಂಭಿಸಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ₹2 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಉಡುಪಿಯಲ್ಲಿಯೂ ಅಂತಹುದೇ ಕೇಂದ್ರ ನಿರ್ಮಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಸಂಸದೆ ಶೋಭಾ ಕರಾಂದ್ಲಾಜೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಮಾಜಿ ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಮೆಂಡನ್‌, ಉಡುಪಿ– ದಕ್ಷಿಣ ಕನ್ನಡ ಜಿಲ್ಲೆ ಮೀನು ಮಾರಾಟ ಫೆಡರೇಶನ್‌ನ ಅಧ್ಯಕ್ಷ ಯಶ್‌ ಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಇದ್ದರು.

* * 

ಮೀನು ಒಣಗಿಸುವ ಜಾಗವನ್ನು ಕಳೆದ 39 ವರ್ಷಗಳಿಂದ ಬಳಸಲಾಗುತ್ತಿದ್ದು , ಮಾಸಿಕ ಬಾಡಿಗೆ ನೀಡಲಾಗುತ್ತಿದೆ. ಇದು ಹೊರೆಯಾಗಿರುವುದರಿಂದ 30 ವರ್ಷಗಳ ಅವಧಿಗೆ ಗುತ್ತಿಗೆ ನೀಡಿ.
ಮಹಿಳಾ ಮೀನುಗಾರ ಸಂಘ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT