ಆರೋಗ್ಯ ಸೇವೆಗಳ ಮೇಲೆ ಸವಾರಿ ಸಲ್ಲದು: ಬಿ.ಎಸ್‌. ಯಡಿಯೂರಪ್ಪ

7

ಆರೋಗ್ಯ ಸೇವೆಗಳ ಮೇಲೆ ಸವಾರಿ ಸಲ್ಲದು: ಬಿ.ಎಸ್‌. ಯಡಿಯೂರಪ್ಪ

Published:
Updated:
ಆರೋಗ್ಯ ಸೇವೆಗಳ ಮೇಲೆ ಸವಾರಿ ಸಲ್ಲದು: ಬಿ.ಎಸ್‌. ಯಡಿಯೂರಪ್ಪ

ಬೆಂಗಳೂರು: ‘ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಕಡಿವಾಣ ಹಾಕುವ ನೆಪದಲ್ಲಿ ಆರೋಗ್ಯ ಸೇವೆಗಳ ಮೇಲೆ ಸವಾರಿ ಮಾಡುವುದು ಸರಿಯಲ್ಲ’ ಎಂದು  ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ.

‘ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ ಜಾರಿಗೆ ತರುವ ಮುನ್ನ ವಿವಿಧ ಕ್ಷೇತ್ರಗಳ ತಜ್ಞರ ಜತೆ ಸಮಾಲೋಚನೆ ನಡೆಸಬೇಕು. ಮಸೂದೆ ವಿರುದ್ಧ ಯಾರಾದರೂ ನ್ಯಾಯಾಲಯಕ್ಕೆ ಹೋದರೆ ಸರ್ಕಾರಕ್ಕೆ ಜಯ ಸಿಗುತ್ತದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು. ಅವೆಲ್ಲವನ್ನೂ ಮಾಡದೇ ಹಠಮಾರಿ ಧೋರಣೆ ಅನುಸರಿಸುತ್ತಿರುವುದು ಸರಿಯಾದ ಕ್ರಮವಲ್ಲ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಸರ್ಕಾರಿ ಆಸ್ಪತ್ರೆಗಳ ಸೇವಾ ಗುಣಮಟ್ಟ ಸುಧಾರಣೆಯಾದರೆ ಆರೋಗ್ಯ ಕ್ಷೇತ್ರದಲ್ಲಿ ಸಹಜವಾಗಿಯೇ ಸ್ಪರ್ಧಾತ್ಮಕ ವಾತಾವರಣ ನಿರ್ಮಾಣವಾಗುತ್ತದೆ.

ಜನ ಸಾಮಾನ್ಯರ ಶೋಷಣೆ ತಪ್ಪುತ್ತದೆ. ತೀರಾ ಹೀನಾಯ ಸ್ಥಿತಿಯಲ್ಲಿರುವ ಸರ್ಕಾರಿ ಆಸ್ಪತ್ರೆಗಳ ಸುಧಾರಣೆಯತ್ತ ಕಿಂಚಿತ್ತೂ ಗಮನ ಹರಿಸದೇ ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಹೇರಲು ಮುಂದಾಗಿರುವ ನಿರ್ಧಾರ ಆಕ್ಷೇಪಾರ್ಹ’ ಎಂದೂ ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry