ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2020ರಲ್ಲಿ ಮುಂದಿನ ವಿಶ್ವ ಟ್ವೆಂಟಿ–20 ಟೂರ್ನಿ ?

Last Updated 18 ಜೂನ್ 2017, 19:30 IST
ಅಕ್ಷರ ಗಾತ್ರ

ಲಂಡನ್‌: ಮುಂದಿನ ವಿಶ್ವ ಟ್ವೆಂಟಿ–20 ಟೂರ್ನಿಯನ್ನು 2018ರ ಬದಲು 2020ರಲ್ಲಿ ಆಯೋಜಿಸಲು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ನಿರ್ಧರಿಸಿದೆ ಎಂದು ಉನ್ನತ ಮೂಲಗಳು ಬಹಿರಂಗ ಮಾಡಿವೆ.

ಐಸಿಸಿ ಸದಸ್ಯ ರಾಷ್ಟ್ರಗಳು ದ್ವಿಪಕ್ಷೀಯ ಸರಣಿಗಳಲ್ಲಿ ಪಾಲ್ಗೊಳ್ಳಲಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು ಅಸ್ಟ್ರೇಲಿಯಾ  ಅಥವಾ ದಕ್ಷಿಣ ಆಫ್ರಿಕಾದಲ್ಲಿ ಟೂರ್ನಿಯನ್ನು ಆಯೋಜಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮೊದಲ ವಿಶ್ವ ಟ್ವೆಂಟಿ –20 ಟೂರ್ನಿ ದಕ್ಷಿಣ ಆಫ್ರಿಕಾದಲ್ಲಿ 2007ರಲ್ಲಿ ನಡೆದಿತ್ತು. ನಂತರ ಇಂಗ್ಲೆಂಡ್‌ (2009), ವೆಸ್ಟ್‌ ಇಂಡೀಸ್‌ (2010), ಶ್ರೀಲಂಕಾ (2012), ಬಾಂಗ್ಲಾದೇಶ (2014) ಮತ್ತು ಭಾರತ (2016) ಟೂರ್ನಿಗೆ ಆತಿಥ್ಯ ವಹಿಸಿದ್ದವು.

ವಿವಿಧ ದೇಶಗಳಲ್ಲಿ ದೇಶಿ ಮಟ್ಟದ ಟ್ವೆಂಟಿ–20 ಟೂರ್ನಿಗಳು 2018ರ ವೇಳೆ ನಡೆಯಲಿವೆ. ಇದರಿಂದ ಸಾಕಷ್ಟು ಆದಾಯ ಅಲ್ಲಿನ ಕ್ರಿಕೆಟ್‌ ಸಂಸ್ಥೆಗಳಿಗೆ ಬರುತ್ತದೆ.

ದ್ವಿಪಕ್ಷೀಯ ಸರಣಿಗಳನ್ನು ಆಯೋಜಿಸಿದರೆ ಟಿವಿ ಪ್ರಸಾರದ ಹಕ್ಕಿಗಾಗಿ ಸಿಗುವ ಬೃಹತ್‌ ಮೊತ್ತದ ಆದಾಯವನ್ನು ಕಳೆದುಕೊಳ್ಳುವುದಕ್ಕೆ ಯಾರೂ ಸಿದ್ಧರಿಲ್ಲ. ಹೀಗಾಗಿ ವಿಶ್ವ ಟ್ವೆಂಟಿ–20 ಟೂರ್ನಿಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT