ವಿಷ ಸೇವಿಸಿ ರೈತ ಅತ್ಮಹತ್ಯೆ

7

ವಿಷ ಸೇವಿಸಿ ರೈತ ಅತ್ಮಹತ್ಯೆ

Published:
Updated:
ವಿಷ ಸೇವಿಸಿ ರೈತ ಅತ್ಮಹತ್ಯೆ

ಬೆಂಗಳೂರು: ಹೆಸರಘಟ್ಟ ಹೋಬಳಿಯ ಹನಿಯೂರು ಗ್ರಾಮದ ರೈತ ರಾಮೇಗೌಡ   ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶನಿವಾರ ಬೆಳಿಗ್ಗೆ ಕ್ರಿಮಿನಾಶಕ ಸೇವಿಸಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ  ಸಂಜೆ ಮೃತಪಟ್ಟಿದ್ದಾರೆ.

ಅವರು ದೊಡ್ಡಬಳ್ಳಾಪುರದ ಫೆಡರಲ್ ಮೊಗಲ್ ಬ್ಯಾಂಕಿನಲ್ಲಿ ₹2.5 ಲಕ್ಷ ಸಾಲ ಪಡೆದಿದ್ದರು. ಸಾಲ ತೀರಿಸ ಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

₹5 ಲಕ್ಷ ಪರಿಹಾರ: ನಗರ ಜಿಲ್ಲಾಧಿಕಾರಿ ವಿ.ಶಂಕರ್‌ ಅವರು ರಾಮೇಗೌಡ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ವೇಳೆ ಮಾತನಾಡಿದ ಅವರು, ‘ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲಾಗುತ್ತದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry