ರಾಷ್ಟ್ರಪತಿ ಚುನಾವಣೆ: ನಾಮಪತ್ರ ಸಲ್ಲಿಸಿದ ಕೋವಿಂದ್‌

7

ರಾಷ್ಟ್ರಪತಿ ಚುನಾವಣೆ: ನಾಮಪತ್ರ ಸಲ್ಲಿಸಿದ ಕೋವಿಂದ್‌

Published:
Updated:
ರಾಷ್ಟ್ರಪತಿ ಚುನಾವಣೆ: ನಾಮಪತ್ರ ಸಲ್ಲಿಸಿದ ಕೋವಿಂದ್‌

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್‌ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಕೋವಿಂದ್‌ ಅವರು ಸಂಸತ್‌ ಭವನದಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿಯ ಹಿರಿಯ ಮುಖಂಡರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಸಲು ಜೂನ್‌ 28 ಕೊನೆಯ ದಿನ. ಜುಲೈ 17ರಂದು ಚುನಾವಣೆ ನಡೆಯಲಿದೆ. ಜುಲೈ 20ರಂದು ಮತ ಎಣಿಕೆ ನಡೆಯಲಿದೆ.

ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಅಧಿಕಾರಾವಧಿ ಜುಲೈ 24ರಂದು ಕೊನೆಗೊಳ್ಳಲಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry