ಆಗಸ್ಟ್ 5ರಂದು ಉಪರಾಷ್ಟ್ರಪತಿ ಚುನಾವಣೆ

7

ಆಗಸ್ಟ್ 5ರಂದು ಉಪರಾಷ್ಟ್ರಪತಿ ಚುನಾವಣೆ

Published:
Updated:
ಆಗಸ್ಟ್ 5ರಂದು ಉಪರಾಷ್ಟ್ರಪತಿ ಚುನಾವಣೆ

ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 5ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಗುರುವಾರ ಘೋಷಿಸಿದೆ.

ಉಪರಾಷ್ಟ್ರಪತಿ ಚುನಾವಣೆ ವಿಷಯವಾಗಿ ಜುಲೈ 4ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಜುಲೈ 18 ಕೊನೆಯ ದಿನವಾಗಿರಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ನಸೀಮ್ ಜೈದಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜುಲೈ 19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಜುಲೈ 21 ಕೊನೆಯ ದಿನವಾಗಿರಲಿದೆ. ಆಗಸ್ಟ್ 5ರಂದೇ ಮತ ಎಣಿಕೆಯೂ ನಡೆಯಲಿದೆ ಎಂದು ಜೈದಿ ಹೇಳಿದರು.

ಹಾಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ಅವಧಿ ಆಗಸ್ಟ್ 10ಕ್ಕೆ ಕೊನೆಯಾಗಲಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry