ಶುಕ್ರವಾರ, ಡಿಸೆಂಬರ್ 6, 2019
17 °C

ಅನಂತ್‌ನಾಗ್‌ನಲ್ಲಿ ಉಗ್ರರು–ಯೋಧರ ನಡುವೆ ಗುಂಡಿನ ಚಕಮಕಿ: ಮಹಿಳೆ ಸಾವು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಅನಂತ್‌ನಾಗ್‌ನಲ್ಲಿ ಉಗ್ರರು–ಯೋಧರ ನಡುವೆ ಗುಂಡಿನ ಚಕಮಕಿ: ಮಹಿಳೆ ಸಾವು

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಗುಂಡೇಟು ತಗುಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮನೆಯೊಂದರಲ್ಲಿ ಉಗ್ರರು ಅವಿತಿರುವ ಖಚಿತ ಮಾಹಿತಿ ಮೇರೆಗೆ ನಸುಕಿನ ಜಾವ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಮನೆಯನ್ನು ಸುತ್ತುವರಿಯುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣವೇ ಯೋಧರೂ ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ, ಮಹಿಳೆಯೊಬ್ಬರು ಗುಂಡೇಟು ತಗುಲಿ ಮೃತಪಟ್ಟಿದ್ದಾರೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ಗುಂಡಿನ ಚಕಮಕಿ ಮುಂದುವರಿದಿದೆ ಎನ್ನಲಾಗಿದೆ.

ಮನೆಯೊಳಗೆ ಇನ್ನಷ್ಟು ನಾಗರಿಕರನ್ನು ಉಗ್ರರು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿರುವ ಅನುಮಾನ ಇದ್ದು, ರಕ್ಷಣೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಕೆಲವು ಮೂಲಗಳ ಪ್ರಕಾರ, ಮನೆಯಲ್ಲಿ ಅವಿತಿರುವುದು ಲಷ್ಕರ್ ಎ ತೊಯ್ಬಾದ (ಎಲ್‌ಇಟಿ) ಉಗ್ರರು ಎನ್ನಲಾಗಿದೆ.

ಪ್ರತಿಕ್ರಿಯಿಸಿ (+)