ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧಾರ್‌ ನೋಂದಣಿ ಜನಜಾಗೃತಿಯಾಗಲಿ

Last Updated 1 ಜುಲೈ 2017, 6:45 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಆಧಾರ್‌ ನೋಂದಣಿ ಮಾಡಿಕೊಳ್ಳದೆ ಬಾಕಿ ಉಳಿದವರ ನೋಂದಣಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬೆಂಗಳೂರಿನ ಇ–ಆಡಳಿತ ಕೇಂದ್ರ ಹಾಗೂ ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ, ಸಿಬ್ಬಂದಿಗೆ ಆಧಾರ್ ನೋಂದಣಿ, ಸೀಡಿಂಗ್‌ ಹಾಗೂ ಆಧಾರ್‌ಗೆ ಸಂಬಂಧಿಸಿದ ಸೇವೆಗಳ ಬಗ್ಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ ಆಧಾರ್‌ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರದ ನಿರ್ದೇಶನದಂತೆ ಸರದಿ ಪ್ರಕಾರ ಜಿಲ್ಲೆಯಲ್ಲಿ ಕಾರ್ಯಾಗಾರ ನಡೆಸಲಾಗುತ್ತಿದೆ. ರಾಜ್ಯದ ಆರು ಕೋಟಿ ಜನಸಂಖ್ಯೆಯಲ್ಲಿ ಶೇ 93.84ರಷ್ಟು ಜನರು ಆಧಾರ್‌ ಸಂಖ್ಯೆ ಹೊಂದಿದ್ದಾರೆ. ಜಿಲ್ಲೆಯಲ್ಲಿ 18.93 ಲಕ್ಷ ಜನ ಆಧಾರ್‌ ಸಂಖ್ಯೆ ಹೊಂದಿದ್ದು, 1.48ಲಕ್ಷ ಜನರ ಆಧಾರ್‌ ನೋಂದಣಿ ಮಾಡಬೇಕಾಗಿದೆ ಎಂದು ತಿಳಿಸಿದರು.

ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಿಡಿಪಿಒ ಹಾಗೂ ಅಂಗನವಾಡಿ ಕಾರ್ಯಕರ್ತರು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ನಡೆಸಬೇಕು. ವಿದ್ಯಾರ್ಥಿಗಳ ನೋಂದಣಿಗೂ ಶಾಲೆಯಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಕೂರ್ಮಾರಾವ್‌ ಮಾತನಾಡಿ, 4.85 ಲಕ್ಷ ಜನರು ಜಿಲ್ಲೆಯಲ್ಲಿ ನರೇಗಾ ಜಾಬ್‌ ಕಾರ್ಡ್‌ ಹೊಂದಿದ್ದಾರೆ. ಅವರೆಲ್ಲರ ಆಧಾರ್‌ ಸಂಖ್ಯೆ ಲಿಂಕ್‌ ಮಾಡಬೇಕಾಗಿದೆ.

ಬ್ಯಾಂಕ್‌ ಖಾತೆಗೆ ಆಧಾರ್ ಜೋಡಣೆ ಮಾಡಲಾಗುತ್ತಿದ್ದು, ಎಲ್ಲರೂ ತ್ವರಿತವಾಗಿ ಆಧಾರ್‌ ಸಂಖ್ಯೆ ಹೊಂದಬೇಕು ಎಂದು ಹೇಳಿದರು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೇಯಸ್‌, ರಘುವಂಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

* * 

ಆಧಾರ್‌ ಸಂಖ್ಯೆ ಮೂಲಕ ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಲು ಜನರು ಮುಂದೆ ಬರಬೇಕು. ಇದಕ್ಕಾಗಿ ಅಧಿಕಾರಿಗಳು ಜನರಿಗೆ ತಿಳಿವಳಿಕೆ ನೀಡಬೇಕಾಗಿದೆ.
ಡಾ.ಬಗಾದಿ ಗೌತಮ್‌
ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT