ಶನಿವಾರ, ಡಿಸೆಂಬರ್ 7, 2019
25 °C

ಆಗುಂಬೆಯಲ್ಲಿ 10 ಸೆಂ.ಮೀ. ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಗುಂಬೆಯಲ್ಲಿ 10 ಸೆಂ.ಮೀ. ಮಳೆ

ಬೆಂಗಳೂರು: ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.

ಆಗುಂಬೆಯಲ್ಲಿ 10 ಸೆಂ.ಮೀ. ಮತ್ತು ಖಾನಾಪುರದಲ್ಲಿ 7 ಸೆಂ.ಮೀ. ಮಂಗಳೂರು, ಮೂಡುಬಿದಿರೆ, ಧರ್ಮಸ್ಥಳ,  ಜಗಲ್‌ಪೇಟೆಯಲ್ಲಿ ತಲಾ 5 ಸೆಂ.ಮೀ., ಪಣಂಬೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಗೇರುಸೊಪ್ಪ, ಮಂಕಿ, ಕದ್ರ, ಲೊಂಡಾದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ.

ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಮತ್ತು ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿಕ್ರಿಯಿಸಿ (+)