ಮಂಗಳವಾರ, ಡಿಸೆಂಬರ್ 10, 2019
18 °C

ಹಲ್ಲೆ ನಡೆಸಿ ದರೋಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಲ್ಲೆ ನಡೆಸಿ ದರೋಡೆ

ಚಿಕ್ಕಬಳ್ಳಾಪುರ: ನಗರದ ಬಿ.ಬಿ ರಸ್ತೆಯಲ್ಲಿರುವ ಚೆಮ್ಮನೂರ್ ಜ್ಯೂಯಲರ್ಸ್ ಮಳಿಗೆಗೆ ಶನಿವಾರ ಸಂಜೆ 6.30ರ ಸಮಯದಲ್ಲಿ ಹೆಲ್ಮೆಟ್ ಧರಿಸಿದ್ದ 6 ಮಂದಿ ಒಳನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಿಂದ ಇಡೀ ನಗರ ಬೆಚ್ಚಿ ಬಿದ್ದಿದೆ.

ನಗರದ ಶನೇಶ್ವರ ದೇವಾಲಯದ ಬಳಿ ಮಳಿಗೆ ಇದೆ. ಲಾಂಗ್‌ಗಳನ್ನು ಹಿಡಿದು ಏಕಾಏಕಿ ಒಳನುಗ್ಗಿದಾಗ ಸೆಕ್ಯುರಿಟಿ ಗಾರ್ಡ್ ಅಶ್ವತ್ಥಪ್ಪ ತಡೆಯಲು ಪ್ರಯತ್ನಿಸಿದ್ದಾರೆ. ಆತ್ಮ ರಕ್ಷಣೆಗಾಗಿ ತಮ್ಮಲ್ಲಿದ್ದ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ಇದರಿಂದ ಕೋಪಗೊಂಡ ದರೋಡೆಕೋರರು ಅವರ  ಮೇಲೆ ಮನಬಂದಂತೆ ಲಾಂಗ್‌ನಿಂದ ಹಲ್ಲೆ ಮಾಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ್ ಕುಮಾರ್, ಡಿವೈಎಸ್ಪಿ ಪುರುಷೋತ್ತಮ್, ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಶಿವಸ್ವಾಮಿ ಭೇಟಿ ನೀಡಿದರು. ಶ್ವಾನ ದಳ ಕರೆಸಲಾಗಿತ್ತು. 

‘ಮಳಿಗೆಯ ಸಿಸಿ ಟಿ.ವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ. ದರೋಡೆಕೋರರ ಬಂಧನಕ್ಕೆ ಬಲೆ ಬೀಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)