ಭಾನುವಾರ, ಡಿಸೆಂಬರ್ 8, 2019
21 °C

ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಗೀತಾ ರಾಮಾನುಜಂಗೆ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಗೀತಾ ರಾಮಾನುಜಂಗೆ ಆಹ್ವಾನ

ಬೆಂಗಳೂರು: ಯಶವಂತಪುರ ಕ್ಷೇತ್ರದ 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ಗೀತಾ ರಾಮಾನುಜಂ ಅವರನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಯಿತು.

ಸ್ವಾಗತ ಸಮಿತಿಯ ಅಧ್ಯಕ್ಷ  ಎಸ್.ಟಿ.ಸೋಮಶೇಖರ್ ಗೀತಾ ಅವರಿಗೆ ಆಹ್ವಾನ ಪತ್ರಿಕೆ ನೀಡಿ, ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿಕೊಡುವಂತೆ ವಿನಂತಿಸಿದರು.

ಬಳಿಕ ಮಾತನಾಡಿದ ಅವರು, ‘ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಸಮ್ಮೇಳನಾಧ್ಯಕ್ಷರಾಗಿ ಮಹಿಳೆಯನ್ನು ಆಯ್ಕೆ ಮಾಡಲಾಗಿದೆ. ಜುಲೈ 9

ರಂದು ಕೊಮ್ಮಘಟ್ಟ ರಸ್ತೆಯ ಶೇಷಾದ್ರಿಪುರ ಕಾಲೇಜಿನಲ್ಲಿ ಸಮ್ಮೇಳನ ನಡೆಯಲಿದೆ. ಎಲ್ಲರೂ ಸಮ್ಮೇಳನದಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.

ಪ್ರತಿಕ್ರಿಯಿಸಿ (+)