ಭಾನುವಾರ, ಡಿಸೆಂಬರ್ 8, 2019
25 °C

ಭಾರತ ಕ್ರಿಕೆಟ್ ತಂಡದಲ್ಲಿ ಎಸ್‍ಸಿ, ಎಸ್‍ಟಿ ಮೀಸಲಾತಿಗೆ ಕೇಂದ್ರ ಸಚಿವ ಆಠವಲೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾರತ ಕ್ರಿಕೆಟ್ ತಂಡದಲ್ಲಿ ಎಸ್‍ಸಿ, ಎಸ್‍ಟಿ ಮೀಸಲಾತಿಗೆ ಕೇಂದ್ರ ಸಚಿವ ಆಠವಲೆ ಆಗ್ರಹ

ನಾಗ್ಪುರ: ‘ಭಾರತ ಕ್ರಿಕೆಟ್ ತಂಡ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ಎದುರು ಸೋಲು ಕಂಡಿರುವುದನ್ನು ತನಿಖೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಿದ್ದ ಕೇಂದ್ರ ಸಚಿವ ರಾಮದಾಸ ಆಠವಲೆ ಇದೀಗ ಟೀಂ ಇಂಡಿಯಾದಲ್ಲಿ ಎಸ್‍ಸಿ, ಎಸ್‍ಟಿ ಮೀಸಲಾತಿ ಬೇಕು ಎಂದಿದ್ದಾರೆ.

ನಾಗ್ಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಮದಾಸ ಆಠವಲೆ, ಬಿಸಿಸಿಐ ಭಾರತ ಕ್ರಿಕೆಟ್ ತಂಡದಲ್ಲಿ ಎಸ್‍ಸಿ ಎಸ್‍ಟಿ ಕ್ರೀಡಾಪಟುಗಳಿಗೆ ಮೀಸಲಾತಿ ನೀಡುವ ಮೂಲಕ ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಬೇಕು.

ಒಂದು ವೇಳೆ ಭಾರತದ ಕ್ರಿಕೆಟ್ ಟೀಂನಲ್ಲಿ ಎಸ್‍ಸಿ, ಎಸ್‍ಟಿ ಮೀಸಲಾತಿ ನೀಡುವುದಾದರೆ ತಂಡದ ಸಾಮರ್ಥ್ಯವೂ  ಉತ್ತಮಗೊಳ್ಳಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಪ್ರತಿಕ್ರಿಯಿಸಿ (+)