ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಬದಿ ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಯ ರಕ್ಷಣೆ ಮಾಡಿದ ಉತ್ತರಾಖಂಡ ಸಿಎಂ: ರಾವತ್‌ ಕಾರ್ಯಕ್ಕೆ ಪ್ರಶಂಸೆ

Last Updated 2 ಜುಲೈ 2017, 10:46 IST
ಅಕ್ಷರ ಗಾತ್ರ

ಡೆಹ್ರಾಡೂನ್‌: ರಸ್ತೆಬದಿಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ಕಣಿವೆ ರಾಜ್ಯ ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಅವರು ಮಾನವೀಯತೆ ಮೆರೆದಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮವನ್ನು ಮುಗಿಸಿ ಲಚ್ಚಿವಾಲಾ ಮಾರ್ಗವಾಗಿ ವಾಪಸ್ಸಾಗುತ್ತಿದ್ದಾಗ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯನ್ನು ನೋಡಿದ್ದಾರೆ. ಈ ವೇಳೆ ವ್ಯಕ್ತಿ ಪ್ರಜ್ಞೆ ತಪ್ಪಿರುವುದನ್ನು ಗಮನಿಸಿದ ಅವರು, ವ್ಯಕ್ತಿಯನ್ನು ತಮ್ಮ ಬೆಂಗಾವಲು ಸಿಬ್ಬಂದಿಯ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜತೆಗೆ ತಮ್ಮ ಸಿಬ್ಬಂದಿಯನ್ನು ವ್ಯಕ್ತಿಯ ಜತೆಯಲ್ಲಿಯೇ ಇರಿಸಿ ಬಳಿಕ ಆಸ್ಪತ್ರೆಯಿಂದ ವಾಪಾಸ್ಸಾಗಿದ್ದಾರೆ.

ರಾವತ್‌ ಅವರ ಈ ಮಾನವೀಯ ಕೆಲಸಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT