ಶುಕ್ರವಾರ, ಡಿಸೆಂಬರ್ 6, 2019
18 °C

ಗೋರಕ್ಷಣೆ: ಜನರು ಕಾನೂನು ಕೈಗೆತ್ತಿಕೊಳ್ಳಬಾರದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋರಕ್ಷಣೆ: ಜನರು ಕಾನೂನು ಕೈಗೆತ್ತಿಕೊಳ್ಳಬಾರದು

ಲಖನೌ: ಗೋರಕ್ಷಣೆಯ ಹೆಸರಲ್ಲಿ ಹಿಂಸಾಚಾರ ಸಲ್ಲದು. ಗೋರಕ್ಷಣೆಗಾಗಿ ಜನರು ಕಾನೂನು ಕೈಗೆತ್ತಿಕೊಳ್ಳಬಾರದು. ಒಂದು ವೇಳೆ ಹಾಗೆ ಮಾಡಿದರೆ ನಮ್ಮ ಸರ್ಕಾರ ಯಾರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಹೇಳಿದ್ದಾರೆ.

ಇತ್ತೀಚೆಗೆ ಝೀ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆದಿತ್ಯನಾಥ, ಸರ್ಕಾರ ತಮ್ಮ ಕೆಲಸಗಳನ್ನು ಮಾಡುತ್ತಿದೆ. ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು.

ಅಮಾಯಕ ವ್ಯಕ್ತಿಗಳ ಮೇಲೆ ಹಿಂಸೆ ನಡೆಯಬಾರದು ಎಂದು ನಾವು ಬಯಸುತ್ತೇವೆ. ಒಂದು ವೇಳೆ ಯಾರಾದರೂ ಅಪರಾಧ ಕೃತ್ಯ ಅಥವಾ ಮಾಫಿಯಾದಲ್ಲಿ ತೊಡಗಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಪ್ರತಿಕ್ರಿಯಿಸಿ (+)