ಭಾನುವಾರ, ಡಿಸೆಂಬರ್ 15, 2019
23 °C

ಸಂಜೋತಾ ರೈಲು ಸ್ಫೋಟ ಕಾಲಾವಕಾಶ ಕೇಳಿದ ಪಾಕ್‌

ಪಿಟಿಐ Updated:

ಅಕ್ಷರ ಗಾತ್ರ : | |

ಸಂಜೋತಾ ರೈಲು ಸ್ಫೋಟ   ಕಾಲಾವಕಾಶ ಕೇಳಿದ ಪಾಕ್‌

ನವದೆಹಲಿ: 2007ರಲ್ಲಿ ನಡೆದ ಸಂಜೋತಾ ಎಕ್ಸ್‌ಪ್ರೆಸ್‌ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿ ಸಾಕ್ಷಿಗಳನ್ನು ಹರಿಯಾಣ ನ್ಯಾಯಾಲ ಯದ ಮುಂದೆ ಹಾಜರುಪಡಿಸಲು ಪಾಕಿಸ್ತಾನ ನಾಲ್ಕು ತಿಂಗಳ ಕಾಲಾವಕಾಶ ಕೇಳಿದೆ.

ಕಳೆದ ತಿಂಗಳು ಪಂಚಕುಲದ ಎನ್‌ಐಎ(ರಾಷ್ಟ್ರೀಯ ತನಿಖಾ ಸಂಸ್ಥೆ) ವಿಶೇಷ ನ್ಯಾಯಾಲಯ ಈ ಸಂಬಂಧ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರು  ಪಡಿಸುವಂತೆ ಪಾಕಿಸ್ತಾನಕ್ಕೆ ಸಮನ್ಸ್‌ ಜಾರಿ ಮಾಡಿತ್ತು.

ಸಾಕ್ಷಿಗಳನ್ನು ಹಾಜರುಪಡಿಸುವ ಸಂಬಂಧ ನಿರ್ಧಾರ ಕೈಗೊಳ್ಳಲು ಇನ್ನೂ ನಾಲ್ಕು ತಿಂಗಳ ಕಾಲಾವಕಾಶ ಬೇಕು ಎಂದು ರಾಜತಾಂತ್ರಿಕ ಅಧಿಕಾರಿಗಳ ಮೂಲಕ  ಪಾಕಿಸ್ತಾನ ಮಾಹಿತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈ 4ರಂದು ಸಾಕ್ಷಿಗಳನ್ನು ವಿಚಾರಣೆಗೆ ಹಾಜರುಪಡಿಸಬೇಕು ಎಂದು ಮಾರ್ಚ್‌ 17ರಂದು ಸಮನ್ಸ್‌ ಹೊರಡಿಸಲಾಗಿತ್ತು. ಹರಿಯಾಣ ನ್ಯಾಯಾಲಯದಲ್ಲಿ ಮಂಗಳವಾರ (ಜು.4) ನಡೆಯಲಿರುವ ವಿಚಾರಣೆಯ ಸಂದರ್ಭದಲ್ಲಿ ಪಾಕಿಸ್ತಾನದ ಅಧಿಕಾರಿಗಳ ನಿರ್ಧಾರದ ಬಗ್ಗೆ ಎನ್ಐಎ ವಕೀಲರು ವಿಶೇಷ ನ್ಯಾಯಾಲಯಕ್ಕೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)