ಸೋಮವಾರ, ಡಿಸೆಂಬರ್ 16, 2019
25 °C

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ರಾಜ್ಯಕ್ಕೆ ಪ್ರಮಥಾ ಪ್ರಥಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ರಾಜ್ಯಕ್ಕೆ  ಪ್ರಮಥಾ ಪ್ರಥಮ

ಹೊನ್ನಾವರ: ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಲ್ಲಿಯ ಮಾರ್‌ ಥೋಮಾ ಇಂಗ್ಲಿಷ್‌ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಮಥಾ ಗಜಾನನ ಭಟ್ಟ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಈ ಹಿಂದೆ 625ಕ್ಕೆ 623 ಅಂಕದೊಂದಿಗೆ ರಾಜ್ಯಕ್ಕೆ 3ನೇ ಸ್ಥಾನ ಪಡೆದಿದ್ದ ಪ್ರಮಥಾ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಳು. ಇದೀಗ ಮರು ಮೌಲ್ಯಮಾಪನದಲ್ಲಿ ಪ್ರಥಮ ಸ್ಥಾನ ಲಭ್ಯವಾಗಿದೆ.

ಪ್ರಮಥಾ, ಪ್ರಾಧ್ಯಾಪಕ ಡಾ.ಜಿ.ಎನ್.ಭಟ್ಟ ಹಾಗೂ ಶಿಕ್ಷಕಿ ಶಾಂತಿ ಭಟ್ಟ ಅವರ ಪುತ್ರಿ. ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ಭಟ್ಟ ಹಾಗೂ ಮಾರ್‌ ಥೋಮಾ ಶಾಲೆಯ ಆಡಳಿತ ಸಮಿತಿಯ ಸದಸ್ಯರು ಹಾಗೂ ಸಿಬ್ಬಂದಿ ಪ್ರಮಥಾ ಮನೆಗೆ ತೆರಳಿ ಅಭಿನಂದನೆ ಸಲ್ಲಿಸಿದರು.

ಪ್ರತಿಕ್ರಿಯಿಸಿ (+)