ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

Last Updated 2 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ಅರಣ್ಯ ವಿಭಾಗದ ವತಿಯಿಂದ ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ದೊಡ್ಡಬೊಮ್ಮಸಂದ್ರದ ಕೆರೆ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳು, ವಾಯುವಿಹಾರಿಗಳು, ಶಾಲಾ ಮಕ್ಕಳು ಹಾಗೂ ಶಿಕ್ಷಕರು ಗಿಡಗಳನ್ನು ನೆಟ್ಟು ನೀರೆರೆದರು.
ಬಿಬಿಎಂಪಿ ಸದಸ್ಯೆ ಜಯಲಕ್ಷ್ಮಮ್ಮ ಪಿಳ್ಳಪ್ಪ, ‘ಕೆರೆಯ ಆವರಣದಲ್ಲಿ ಅರಳಿ, ನೇರಳೆ, ಬೇವು, ಹೊಂಗೆ, ಮಹಾಗನಿ ಹಾಗೂ ಔಷಧೀಯ ಸಸ್ಯಗಳು ಸೇರಿದಂತೆ  ಒಂದು ಸಾವಿರ ಗಿಡಗಳನ್ನು ನೆಡಲಾಗುತ್ತದೆ’ ಎಂದು ತಿಳಿಸಿದರು.

‘ಬಿಇಎಲ್‌ ಕಾರ್ಖಾನೆಯು ₹13 ಕೋಟಿ ವೆಚ್ಚದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪಿಸಲಿದೆ. ಸೆಪ್ಟೆಂಬರ್‌ನಿಂದ ಕಾಮಗಾರಿ ಆರಂಭವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT