ಮಂಗಳವಾರ, ಡಿಸೆಂಬರ್ 10, 2019
16 °C

ಭ್ರಷ್ಟಾಚಾರ ಪ್ರಕರಣ ಮರುತನಿಖೆ ಖಲೀದಾ ಅರ್ಜಿ ವಜಾ

ಪಿಟಿಐ Updated:

ಅಕ್ಷರ ಗಾತ್ರ : | |

ಭ್ರಷ್ಟಾಚಾರ ಪ್ರಕರಣ  ಮರುತನಿಖೆ ಖಲೀದಾ ಅರ್ಜಿ ವಜಾ

ಢಾಕಾ: ತಮ್ಮ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ಕೋರಿ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಕೆಳ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಸುಸೂತ್ರವಾಗಿ ನಡೆಸಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.ಮುಖ್ಯ ನ್ಯಾಯಮೂರ್ತಿ ಸುರೇಂದ್ರ ಕುಮಾರ್ ಸಿನ್ಹಾ ನೇತೃತ್ವದ ಪೀಠವು ಖಲೀದಾ ಅರ್ಜಿಯನ್ನು ವಜಾಗೊಳಿಸಿ, ಹೈಕೋರ್ಟ್‌ ತೀರ್ಪನ್ನು ಎತ್ತಿ ಹಿಡಿದಿದೆ.ಖಲೀದಾ ಅವರು ಅಧ್ಯಕ್ಷೆಯಾಗಿರುವ ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಷನಲ್‌ ಪಾರ್ಟಿ (ಬಿಎನ್‌ಪಿ) 2014ರ ಸಾರ್ವತ್ರಿಕ ಚುನಾವಣೆಯನ್ನು ಬಹಿಷ್ಕರಿಸಿದ ನಂತರ ಸಂಸತ್‌ನಲ್ಲಿ ಪ್ರಾತಿನಿಧ್ಯ ಕಳೆದುಕೊಂಡಿತ್ತು.

ಪ್ರತಿಕ್ರಿಯಿಸಿ (+)