ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್: ವಿಂಡೀಸ್ ಸಾಧಾರಣ ಮೊತ್ತ

Last Updated 2 ಜುಲೈ 2017, 20:05 IST
ಅಕ್ಷರ ಗಾತ್ರ

ನಾರ್ಥ್ ಸೌಂಡ್: ಭಾರತ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್ ತಂಡ ಸಾಧಾರಣ ಮೊತ್ತ ಕಲೆಹಾಕಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಜೇಸನ್ ಹೋಲ್ಡರ್  ಬಳಗವು 50 ಓವರ್‌ಗಳಲ್ಲಿ 9 ವಿಕೆಟ್‌ಗೆ 189 ರನ್‌ ಕಲೆಹಾಕಿತ್ತು.
ಹಾರ್ದಿಕ್‌ ಪಾಂಡ್ಯ 40 ರನ್‌ಗಳಿಗೆ 3 ವಿಕೆಟ್ ಕಬಳಿಸಿದರೆ ಉಮೇಶ್ ಯಾದವ್‌ 36 ರನ್‌ಗಳನ್ನು ನೀಡಿ ಮೂರು ವಿಕೆಟ್ ಗಳಿಸಿದರು.

ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡವು ಪತ್ರಿಕೆಯು ಮುದ್ರಣಕ್ಕೆ ಹೋಗುವ ವೇಳೆಗೆ 17.3 ಓವರ್‌ಗಳಲ್ಲಿ 3 ವಿಕೆಟ್‌ಗಳಿಗೆ 62 ರನ್‌ ಗಳಿಸಿತ್ತು. ಆರಂಭಿಕ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ (ಬ್ಯಾಟಿಂಗ್ 38) ಮತ್ತು  ಮಹೇಂದ್ರಸಿಂಗ್ ದೋನಿ (ಬ್ಯಾಟಿಂಗ್ 11) ಕ್ರೀಸ್‌ನಲ್ಲಿದ್ದರು.

ಸಂಕ್ಷಿಪ್ತ ಸ್ಕೋರು:  ವೆಸ್ಟ್‌ಇಂಡೀಸ್:  50 ಓವರ್‌ಗಳಲ್ಲಿ 9 ವಿಕೆಟ್‌ಗೆ 189 (ಎವಿನ್ ಲೂಯಿಸ್ 35, ಕೆಲೆ ಹೋಪ್‌ 35; ಉಮೇಶ್ ಯಾದವ್ 36ಕ್ಕೆ3, ಹಾರ್ದಿಕ್ ಪಾಂಡ್ಯ 40ಕ್ಕೆ3).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT