ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಪರ್ಯಾಯ ಮಾರ್ಗಗಳನ್ನು ಹುಡುಕಿಕೊಳ್ಳಲಿ: ನಿತೀಶ್ ಕುಮಾರ್

Last Updated 3 ಜುಲೈ 2017, 9:47 IST
ಅಕ್ಷರ ಗಾತ್ರ

ಪಟ್ನಾ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷ ಕಾಂಗ್ರೆಸ್‌ ಪರ್ಯಾಯ ಮಾರ್ಗಗಳನ್ನು ಹುಡುಕಿಕೊಳ್ಳಬೇಕು ಎಂದು ಜೆಡಿ(ಯು) ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ ಜಾರಿಯನ್ನು ಬೆಂಬಲಿಸಿದ್ದು, ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ಬೆಂಬಲ ಸೂಚಿಸಿದ ವಿಷಯಕ್ಕೆ ಸಂಬಧಿಸಿ ಬಿಹಾರದ ಆಡಳಿತಾರೂಢ ಮಿತ್ರಪಕ್ಷ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ನಿತೀಶ್ ಅವರು ಈ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಕಾಂಗ್ರೆಸ್‌ ರಾಷ್ಟ್ರೀಯ ಪಕ್ಷವಾಗಿದ್ದು, 2019ರ ಲೋಕಸಭೆ ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಅಜೆಂಡಾ ಸಿದ್ಧಪಡಿಸಲಿ ಎಂದು ಈಗಾಗಲೇ ಹೇಳಿದ್ದೇನೆ. ಪ್ರತಿಪಕ್ಷವು (ಕಾಂಗ್ರೆಸ್) ಕೇವಲ ಪ್ರತಿಕ್ರಿಯಾತ್ಮಕ ಕಾರ್ಯವನ್ನಷ್ಟೇ ಮಾಡುತ್ತಿದೆ. ಇದು ಕೆಲಸಮಾಡಲಾರದು. ಪರ್ಯಾಯ ಮಾರ್ಗಗಳನ್ನು ಹುಡುಕಿಕೊಳ್ಳಬೇಕಾದ ಅವಶ್ಯಕತೆ ಇದೆ’ ಎಂದು ಹೇಳಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ರಾಮನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡುವ ನಿರ್ಧಾರವನ್ನು ನಿತೀಶ್ ಕುಮಾರ್ ಅವರು ಮರುಪರಿಶೀಲಿಸಲಿ ಎಂದು ಕಾಂಗ್ರೆಸ್‌ ಭಾನುವಾರ ಹೇಳಿತ್ತು.

ಪ್ರಧಾನಿ ಅಭ್ಯರ್ಥಿಯಲ್ಲ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ತಾನಲ್ಲ ಎಂದೂ ನಿತೀಶ್ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ: ನಿತೀಶ್ ಕುಮಾರ್ ಅವರು ಹಲವು ತತ್ವಗಳನ್ನು ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದರು. ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ನಿತೀಶ್ ಅವರು, ‘ತತ್ವಗಳನ್ನು ಬದಲಾಯಿಸುತ್ತಿರುವವರು ನಾನಲ್ಲ, ನೀವು (ಕಾಂಗ್ರೆಸ್‌ನವರು)’ ಎಂದು ಹೇಳಿದ್ದಾರೆ. ಜತೆಗೆ, ಜಿಎಸ್‌ಟಿ ಉದ್ಘಾಟನಾ ಸಮಾರಂಭಕ್ಕೆ ಸಚಿವರನ್ನು ಕಳುಹಿಸಿಕೊಟ್ಟಿರುವ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT