ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನ್ನೆಚ್ಚರಿಕಾ ಕ್ರಮ: ಜೆಕೆಎಲ್‌ಎಫ್‌ ಮುಖ್ಯಸ್ಥ ಯಾಸಿನ್ ಮಲಿಕ್ ಬಂಧನ

Last Updated 3 ಜುಲೈ 2017, 10:37 IST
ಅಕ್ಷರ ಗಾತ್ರ

ಶ್ರೀನಗರ: ಹಿಜ್ಬುಲ್ ಮುಜಾಹಿದೀನ್ ಉಗ್ರ ಬುರ್ಹಾನ್ ವಾನಿ ಹತ್ಯೆಯಾಗಿ ಜುಲೈ 8ಕ್ಕೆ ಒಂದು ವರ್ಷವಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ‘ಜಮ್ಮು ಮತ್ತು ಕಾಶ್ಮೀರ ಲಿಬರೇಷನ್‌ ಫ್ರಂಟ್‌ (ಜೆಕೆಎಲ್‌ಎಫ್‌)’ ಅಧ್ಯಕ್ಷ ಯಾಸಿನ್ ಮಲಿಕ್‌ರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.

ಲಾಲ್‌ಚೌಕ್ ಪ್ರದೇಶದಲ್ಲಿರುವ ಕಚೇರಿಯಿಂದ ಮಲಿಕ್‌ರನ್ನು ಬಂಧಿಸಲಾಗಿದ್ದು, ಶ್ರೀನಗರದ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುರ್ಹಾನ್ ವಾನಿ ಹತ್ಯೆ ವಿರುದ್ಧ ಜುಲೈ 8ರಿಂದ ಒಂದು ವಾರ ಪ್ರತಿಭಟನೆ ನಡೆಸಲು ಜಾಗತಿಕ ಉಗ್ರನೆಂದು ಪರಿಗಣಿಸಲಾಗಿರುವ, ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್ ಕರೆ ನೀಡಿದ್ದ. ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಮಲಿಕ್‌ರನ್ನು ಬಂಧಿಸಲಾಗಿದೆ ಎಂದು ಜೆಕೆಎಲ್‌ಎಫ್‌ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT