ಮಂಗಳವಾರ, ಡಿಸೆಂಬರ್ 10, 2019
17 °C
ಉಭಯ ರಾಷ್ಟ್ರಗಳ ನಡುವಿನ ಒಪ್ಪಂದಗಳು ‘ವಿಶೇಷ’ ಎಂದ ಮೋದಿ

‘ಭಯೋತ್ಪಾದನೆ ವಿರುದ್ಧ ಭಾರತ– ಇಸ್ರೇಲ್‌ ಜಂಟಿ ಹೋರಾಟ’

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

‘ಭಯೋತ್ಪಾದನೆ ವಿರುದ್ಧ ಭಾರತ– ಇಸ್ರೇಲ್‌ ಜಂಟಿ ಹೋರಾಟ’

ಜೆರುಸಲೆಂ: ಇಸ್ರೇಲ್‌ ಜತೆಗಿನ ಭಾರತದ ಒಪ್ಪಂದಗಳನ್ನು ‘ವಿಶೇಷ’ ಎಂದು ಬಣ್ಣಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ‘ಭಯೋತ್ಪಾದನೆ ವಿರುದ್ಧ ಉಭಯರಾಷ್ಟ್ರಗಳು ಜಂಟಿಯಾಗಿ ಹೋರಾಡಲಿವೆ’ ಎಂದಿದ್ದಾರೆ.

ಮೂರು ದಿನಗಳ ಭೇಟಿಗಾಗಿ ಮೋದಿ ಇಸ್ರೇಲ್‌ಗೆ ಬಂದಿಳಿಯಲಿದ್ದಾರೆ. ಮೋದಿ ಇಸ್ರೇಲ್‌ಗೆ ಭೇಟಿ ನೀಡುತ್ತಿರುವ ಭಾರತದ ಮೊದಲ ಪ್ರಧಾನಮಂತ್ರಿ ಎನಿಸಿದ್ದಾರೆ.ಈ ಭೇಟಿ ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ ಬೆಸೆಯುವಲ್ಲಿ ಮುಖ್ಯ ಪಾತ್ರ ವಹಿಸಲಿದೆ ಎಂದು ಮೋದಿ ‘ಇಸ್ರೇಲ್‌ ಹಯೋಮ್‌’ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

ರಕ್ಷಣೆ ಹಾಗೂ ಸೈಬರ್‌ ಸುರಕ್ಷತೆಯ ಕ್ಷೇತ್ರಗಳಲ್ಲಿ ಭಾರತ– ಇಸ್ರೇಲ್‌ ಹಲವು ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ.

ಪ್ರತಿಕ್ರಿಯಿಸಿ (+)