ಬುಧವಾರ, ಡಿಸೆಂಬರ್ 11, 2019
25 °C

ಮಲ್ಲತ್ತಹಳ್ಳಿ ಕೆರೆಯಲ್ಲಿ ದೋಣಿ ವಿಹಾರ ಕೇಂದ್ರ ಸ್ಥಾಪನೆ: ಮುನಿರತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಲ್ಲತ್ತಹಳ್ಳಿ ಕೆರೆಯಲ್ಲಿ ದೋಣಿ ವಿಹಾರ ಕೇಂದ್ರ ಸ್ಥಾಪನೆ: ಮುನಿರತ್ನ

ಬೆಂಗಳೂರು: ಮಲ್ಲತ್ತಹಳ್ಳಿ ಬಡಾವಣೆಯಲ್ಲಿ ಕೊಳವೆಬಾವಿಯ ನೀರು ಸರಬರಾಜು ಮಾಡುವ ಕಾರ್ಯಕ್ರಮಕ್ಕೆ ಶಾಸಕ ಮುನಿರತ್ನ ಚಾಲನೆ ನೀಡಿದರು.

ಐಟಿಐ ಮತ್ತು ಎಂ.ಪಿ.ಎಂ ಬಡಾವಣೆಯಲ್ಲಿನ ರಸ್ತೆಗಳಿಗೆ ಡಾಂಬರು ಹಾಕುವ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಕಾಮಗಾರಿಗೂ ಚಾಲನೆ  ನೀಡಿದರು.

ಬಳಿಕ ಮಾತನಾಡಿದ ಅವರು, ‘ಮಲ್ಲತ್ತಹಳ್ಳಿ ಕೆರೆಯಲ್ಲಿ ದೋಣಿ ವಿಹಾರ ಕೇಂದ್ರ ಸ್ಥಾಪಿಸಲಾಗುವುದು. ಕೆಂಪೇಗೌಡರ ಪ್ರತಿಮೆ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹಾಗೂ ದಿವಂಗತ ಬಾಲಗಂಗಾಧರನಾಥ ಸ್ವಾಮೀಜಿ ಅವರ ಕಂಚಿನ ಪ್ರತಿಮೆಯನ್ನು ಸ್ಥಾಪಿಸಿ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡಲಾಗುವುದು’ ಎಂದರು.

‘ಕೆರೆಗೆ ಕೊಳಚೆ ನೀರು ಸೇರುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ₹16 ಕೋಟಿ ವೆಚ್ಚದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕವನ್ನು ಸ್ಥಾಪಿಸಲಾಗುವುದು’ ಎಂದು ಹೇಳಿದರು.

ಆರೋಪಕ್ಕೆ ಸೊಪ್ಪು ಹಾಕುವುದಿಲ್ಲ: ‘ಕೆಲವರು ರಾಜಕೀಯ ದುರುದ್ದೇಶ ದಿಂದ ನನ್ನ ಮೇಲೆ ವೃಥಾ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಸೊಪ್ಪು ಹಾಕುವುದಿಲ್ಲ. ಅಭಿವೃದ್ಧಿ ಕೆಲಸಗಳ ಕಡೆಗೆ ಗಮನ ಹರಿಸುತ್ತೇನೆ’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)