ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈದುಂಬಿಕೊಳ್ಳುತ್ತಿವೆ ಜಲಾಶಯಗಳು

Last Updated 3 ಜುಲೈ 2017, 19:56 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯಲು ಆರಂಭಿಸಿವೆ. ಪರಿಣಾಮವಾಗಿ ಬಹುತೇಕ ಜಲಾಶಯಗಳ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ.

ಮಹಾರಾಷ್ಟ್ರದ ದಕ್ಷಿಣ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ  ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಆಲಮಟ್ಟಿಯ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಕಳೆದ ಮೂರು ದಿನಗಳಿಂದ ಹೆಚ್ಚಾಗಿದೆ. 

ಎರಡು ದಿನಗಳಲ್ಲಿ ಜಲಾಶಯದಲ್ಲಿ 6.70 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.ಕಳೆದ ಒಂದು ವಾರದ ಅವಧಿಯಲ್ಲಿ  ತುಂಗಭದ್ರಾ ಜಲಾಶಯಕ್ಕೆ ನಾಲ್ಕು ಟಿಎಂಸಿ ಅಡಿಗಳಿಗಿಂತಲೂ ಹೆಚ್ಚು ನೀರು ಹರಿದು ಬಂದಿದೆ.

ಕೊಡಗಿನಲ್ಲೂ ಮಳೆ: ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾನುವಾರ ರಾತ್ರಿಯಿಂದ ಉತ್ತಮ ಮಳೆಯಾಗುತ್ತಿದೆ.

‘ಸುಪ್ರೀಂ’ ಆದೇಶದಂತೆ ತಮಿಳುನಾಡಿಗೆ ನೀರು
ಹಾಸನ:
‘ನಮಗೆ ತೊಂದರೆ ಮಾಡಿಕೊಂಡು ತಮಿಳುನಾಡಿಗೆ ನೀರು ಬಿಡುತ್ತಿಲ್ಲ. ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ, ಜಲಾಶಯಕ್ಕೆ ಹರಿದು ಬಂದ ನೀರಿನಲ್ಲಿ ಸ್ವಲ್ಪ ಪ್ರಮಾಣದ ನೀರನ್ನು ಬಿಡಲಾಗುತ್ತಿದೆ. ನೀರು ಬಿಡದಿದ್ದರೆ ತಮಿಳುನಾಡು ಮತ್ತೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT