ಶುಕ್ರವಾರ, ಡಿಸೆಂಬರ್ 13, 2019
17 °C

ಪುಲ್ವಾಮ ಎನ್‌ಕೌಂಟರ್‌ ಎರಡನೇ ದಿನಕ್ಕೆ: ಮೂರನೇ ಉಗ್ರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಪುಲ್ವಾಮ ಎನ್‌ಕೌಂಟರ್‌ ಎರಡನೇ ದಿನಕ್ಕೆ: ಮೂರನೇ ಉಗ್ರ ಹತ್ಯೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾಪಡೆ ನಡೆಸಿರುವ ಎನ್‌ಕೌಂಟರ್‌ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ. ಇದರೊಂದಿಗೆ ಒಟ್ಟು ಮೂವರು ಉಗ್ರರು ಹತ್ಯೆಯಾಗಿದ್ದಾರೆ.

ಸೋಮವಾರ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದ್ದು, ಮಂಗಳವಾರ ಬೆಳಿಗ್ಗೆ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಶವವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಈ ವರೆಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.

ಬಲ್ಮೂನ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾಪಡೆ ನಿನ್ನೆ ಶೋಧ ಕಾರ್ಯಾಚರಣೆ ಕೈಗೊಂಡಿತ್ತು. ಹತ್ಯೆಯಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಮೂಲಗಳು ಹೇಳಿವೆ.

ಸೋಮವಾರ ನಡೆದ ಕಾರ್ಯಾಚರಣೆ ವೇಳೆ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಪ್ರತಿಕ್ರಿಯಿಸಿ (+)