ಶನಿವಾರ, ಡಿಸೆಂಬರ್ 7, 2019
25 °C

ಚಲಿಸುತ್ತಿರುವ ಬಸ್ಸಿನಲ್ಲಿ ಮಹಿಳೆಯೊಂದಿಗೆ ಬಿಜೆಪಿ ನಾಯಕನ 'ಚಕ್ಕಂದ', ಸಾಮಾಜಿಕ ತಾಣದಲ್ಲಿ ವಿಡಿಯೊ ವೈರಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಲಿಸುತ್ತಿರುವ ಬಸ್ಸಿನಲ್ಲಿ ಮಹಿಳೆಯೊಂದಿಗೆ ಬಿಜೆಪಿ ನಾಯಕನ 'ಚಕ್ಕಂದ', ಸಾಮಾಜಿಕ ತಾಣದಲ್ಲಿ ವಿಡಿಯೊ ವೈರಲ್

ನವದೆಹಲಿ: ಮಹಾರಾಷ್ಟ್ರದ ಬಿಜೆಪಿ ನೇತಾರರೊಬ್ಬರು ಚಲಿಸುತ್ತಿರುವ ಬಸ್ಸಿನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೊವೊಂದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ನಾಗ್ಪುರದಿಂದ ಗಡ್ಚಿರೋಲಿ ಜಿಲ್ಲೆಯ ಚಂದ್ರಾಪುರ್‍‍ಗೆ ಬರುತ್ತಿದ್ದ ಬಸ್ಸಿನ ಕೊನೆಯ ಸೀಟಿನಲ್ಲಿ ಬಿಜೆಪಿ ನಾಯಕ ರವೀಂದ್ರ ಬವಾಂಥಾಡೆ ಮಹಿಳೆಯೊಬ್ಬರಿಗೆ ಮುತ್ತಿಟ್ಟು ಚಕ್ಕಂದವಾಡುತ್ತಿರುವ ದೃಶ್ಯ ವಿಡಿಯೊದಲ್ಲಿದೆ. ಬಸ್ಸಿನಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ರವೀಂದ್ರ ಅವರ ಮುತ್ತಿನಾಟ ಸೆರೆಯಾಗಿದ್ದು, ಫೇಸ್‍ಬುಕ್‍ನಲ್ಲಿ ವಿಡಿಯೊ ಹರಿದಾಡಿದೆ.

ಸಾಮಾಜಿಕ ತಾಣದಲ್ಲಿ ವಿಡಿಯೊ ವೈರಲ್ ಆಗುತ್ತಿದ್ದಂತೆ ಈ ವಿಡಿಯೊದಲ್ಲಿ ಕಾಣಿಸಿಕೊಂಡಿರುವ ಮಹಿಳೆ ರವೀಂದ್ರ ಅವರ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಾರೆ.

ರವೀಂದ್ರ ಅವರು ತನಗೆ ಕೆಲಸ ಕೊಡಿಸುವುದಾಗಿ ಹೇಳಿದ್ದು ಮದುವೆಯಾಗುತ್ತೇನೆ ಎಂದು ಮಾತುಕೊಟ್ಟಿದ್ದರು ಎಂದು ಮಹಿಳೆ ದೂರಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆ ರವೀಂದ್ರ ಅವರು ತಲೆ ಮರೆಸಿಕೊಂಡಿದ್ದಾರೆ ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

ಪ್ರತಿಕ್ರಿಯಿಸಿ (+)