ಬುಧವಾರ, ಡಿಸೆಂಬರ್ 11, 2019
25 °C

ಬಂಟ್ವಾಳ: ಆರೆಸ್ಸೆಸ್ ಕಾರ್ಯಕರ್ತನಿಗೆ ಚೂರಿ ಇರಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಂಟ್ವಾಳ: ಆರೆಸ್ಸೆಸ್ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ: ಆರೆಸ್ಸೆಸ್ ಕಾರ್ಯಕರ್ತನೋರ್ವನ ಮೇಲೆ ತಂಡವೊಂದು ದಾಳಿನಡೆಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಿ.ಸಿ.ರೋಡಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಸಜಿಪಮುನ್ನೂರು ಗ್ರಾಮದ ಕಂದೂರು ನಿವಾಸಿ ತನಿಯಪ್ಪ ಎಂಬವರ ಮಗ ಶರತ್ ಗಾಯಗೊಂಡ ಯುವಕ. ಬಿ.ಸಿ.ರೋಡಿನಲ್ಲಿ ಉದಯಲಾಂಡ್ರಿಯನ್ನು ನಡೆಸುತ್ತಿರುವ ಇವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ, ಅಂಗಡಿಯಿಂದ ಹೊರಬರುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಈ ಕೃತ್ಯವೆಸಗಿ ಪರಾರಿಯಾಗಿದ್ದಾರೆ.

ಚೂರಿ ಇರಿತಕ್ಕೆ ಒಳಗಾದ ಶರತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು,ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಲೂಕಿನಾದ್ಯಂತ 144ಸೆಕ್ಷನ್ ಜಾರಿಯಲ್ಲಿದ್ದರೂ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ರೆಡ್ಡಿ ಸ್ಥಳಕ್ಕೆ ದೌಡಾಯಿಸಿದ್ದು, ಪೊಲೀಸರು ಬಿಗಿಪೊಲೀಸ್ ಬಂದೋಬಸ್ತ್ ಒದಗಿಸಿದ್ದಾರೆ.ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರಿದಿದೆ.

ಪ್ರತಿಕ್ರಿಯಿಸಿ (+)