ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಮುಖ್ಯ ಚುನಾವಣಾ ಆಯುಕ್ತ ಅಚಲ್‌ ಕುಮಾರ್‌ ಜ್ಯೋತಿ

Last Updated 4 ಜುಲೈ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ಗುರುವಾರ (ಜುಲೈ 6) ನಿವೃತ್ತರಾಗುತ್ತಿದ್ದು, ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಅಚಲ್‌ ಕುಮಾರ್‌ ಜ್ಯೋತಿ ಅದೇ ದಿನ ಅಧಿಕಾರ ವಹಿಸಲಿದ್ದಾರೆ ಎಂದು ಕಾನೂನು ಸಚಿವಾಲಯವು
ಅಧಿಸೂಚನೆಯಲ್ಲಿ ತಿಳಿಸಿದೆ.

ನರೇಂದ್ರ ಮೋದಿ ಅವರು ಗುಜರಾತ್‌್ ಮುಖ್ಯಮಂತ್ರಿಯಾಗಿದ್ದ ವೇಳೆ ಅಚಲ್‌ ಕುಮಾರ್‌ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿದ್ದರು.
1975ನೇ ಬ್ಯಾಚಿನ ಗುಜರಾತ್‌ ಕೇಡರ್‌ ಐಎಎಸ್‌ ಅಧಿಕಾರಿಯಾಗಿರುವ  ಅಚಲ್‌, ಗುಜರಾತ್‌ ಮುಖ್ಯ ಕಾರ್ಯದರ್ಶಿಯಾಗಿ 2013ರಲ್ಲಿ ನಿವೃತ್ತಿಯಾಗಿದ್ದರು.

ಇದಕ್ಕೂ ಮುನ್ನ ವಿಚಕ್ಷಣಾ ಆಯುಕ್ತ, ಕಾಂಡ್ಲಾ ಬಂದರು ನಿಗಮದ ಅಧ್ಯಕ್ಷ, ಸರ್ದಾರ್‌ ಸರೋವರ್‌ ನರ್ಮದಾ ನಿಗಮದ ಮುಖ್ಯಸ್ಥ, ಕೈಗಾರಿಕೆ, ಕಂದಾಯ ಹಾಗೂ ನೀರಾವರಿ ಇಲಾಖೆಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. 2015ರ ಮೇ 8ರಂದು ಚುನಾವಣಾ ಆಯೋಗದ ಆಯುಕ್ತರಾಗಿ ಅವರು ಅಧಿಕಾರ ಸ್ವೀಕರಿಸಿದ್ದರು. 

ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರ ಅಧಿಕಾರಾವಧಿ ಐದು ವರ್ಷ ಅಥವಾ ಅವರಿಗೆ 65 ವರ್ಷದ ತನಕ ಹುದ್ದೆಯಲ್ಲಿರಬಹುದು. 21ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಲಿರುವ ಅಚಲ್‌ ಕುಮಾರ್‌ 2018ರ ಜನವರಿ ತಿಂಗಳಲ್ಲಿ ನಿವೃತ್ತರಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT