ಭಾನುವಾರ, ಡಿಸೆಂಬರ್ 8, 2019
21 °C

400 ಮಂದಿಗೆ ಆರೋಗ್ಯ ತಪಾಸಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

400 ಮಂದಿಗೆ ಆರೋಗ್ಯ  ತಪಾಸಣೆ

ಬೆಂಗಳೂರು: ಕಾಂಗ್ರೆಸ್‌ ಕಾರ್ಮಿಕ ವಿಭಾಗದ ಯಶವಂತಪುರ ವಿಧಾನಸಭಾ ಕ್ಷೇತ್ರ ಘಟಕದ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಹಾಗೂ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ವೈದ್ಯ ಡಾ.ಎಸ್‌.ಸಿ.ಶಂಕರಲಿಂಗಯ್ಯ ನೇತೃತ್ವದ ಎಂಟು ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು.

400 ಹೆಚ್ಚು ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಇದರಲ್ಲಿ ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದವರು ಹೆಚ್ಚಾಗಿದ್ದರು. ವನಮಹೋತ್ಸವಕ್ಕೆ ಶಾಸಕ ಎಸ್‌.ಟಿ. ಸೋಮಶೇಖರ್‌ ಚಾಲನೆ ನೀಡಿದರು. ಶಿಬಿರದಲ್ಲಿ ಪಾಲ್ಗೊಂಡಿದ್ದ ಜನರಿಗೆ ಗಿಡಗಳನ್ನು ವಿತರಿಸಲಾಯಿತು.

ಪ್ರತಿಕ್ರಿಯಿಸಿ (+)