ಭಾನುವಾರ, ಡಿಸೆಂಬರ್ 15, 2019
21 °C

ಉಪನ್ಯಾಸಕರು ತರಗತಿಗಳಲ್ಲಿ ಮೊಬೈಲ್‌ ಬಳಸುವಂತಿಲ್ಲ, ಮಹಿಳಾ ಉಪನ್ಯಾಸಕರು ಚೂಡಿದಾರ್‌ ಧರಿಸಿ ಕಾಲೇಜಿಗೆ ಬರುವಂತಿಲ್ಲ: ಕಾಲೇಜು ಶಿಕ್ಷಣ ಇಲಾಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಪನ್ಯಾಸಕರು ತರಗತಿಗಳಲ್ಲಿ ಮೊಬೈಲ್‌ ಬಳಸುವಂತಿಲ್ಲ, ಮಹಿಳಾ ಉಪನ್ಯಾಸಕರು ಚೂಡಿದಾರ್‌ ಧರಿಸಿ ಕಾಲೇಜಿಗೆ ಬರುವಂತಿಲ್ಲ: ಕಾಲೇಜು ಶಿಕ್ಷಣ ಇಲಾಖೆ

ಬೆಂಗಳೂರು: ಕಾಲೇಜು ತರಗತಿಗಳಲ್ಲಿ ಉಪನ್ಯಾಸಕರು ಮೊಬೈಲ್‌ ಬಳಸಬಾರದು ಹಾಗೂ ಮಹಿಳಾ ಉಪನ್ಯಾಸಕರು ಸೀರೆ ಧರಿಸಿ ಬರುವಂತೆ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

‘ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರು ತರಗತಿಗಳಲ್ಲಿ ಪಾಠ ಮಾಡುವಾಗ ಮೊಬೈಲ್‌ನಲ್ಲಿ ಮಾತನಾಡುತ್ತಾರೆ, ವಾಟ್ಸ್‌ ಆ್ಯಪ್‌ ಮತ್ತು ಫೇಸ್‌ಬುಕ್‌ ನೋಡಿ ಕಾಲ ಕಳೆಯುತ್ತಾರೆ. ಮಹಿಳಾ ಉಪನ್ಯಾಸಕರು ಚೂಡಿದಾರ್‌ ಧರಿಸಿ ಕಾಲೇಜಿಗೆ ಬರುತ್ತಾರೆ’ ಎಂದು ಉನ್ನತ ಶಿಕ್ಷಣ ಸಚಿವರಲ್ಲಿ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.

ಕಾಲೇಜು ಆವರಣದಲ್ಲಿ ಮೊಬೈಲ್‌ ಬಳಸುವುದನ್ನು ನಿಷೇಧಿಸಿ ಈಗಾಗಲೇ ಆದೇಶ ಹೊರಡಿಸಲಾಗಿದೆ. ಇದೀಗ ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಮೈಸೂರು ಇಲ್ಲಿಂದ ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ಮೂಲಕ ಸೂಚನೆ ನೀಡಲಾಗಿದೆ.

‘ಕಾಲೇಜುಗಳಲ್ಲಿ ಉಪನ್ಯಾಸಕರು ತರಗತಿಗಳಲ್ಲಿ ಮೊಬೈಲ್‌ ಬಳಸುವುದನ್ನು ತಡೆಯುವುದು ಹಾಗೂ ಮಹಿಳಾ ಉಪನ್ಯಾಸಕರು ಸೀರೆ ಧರಿಸಿ ಕಾಲೇಜಿಗೆ ಬರುವಂತೆ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ತೆಗೆದುಕೊಂಡ ಕ್ರಮದ ಬಗ್ಗೆ ವರದಿ ನೀಡುವಂತೆಯೂ ತಿಳಿಸಿದೆ.

ಪ್ರತಿಕ್ರಿಯಿಸಿ (+)