ಶನಿವಾರ, ಡಿಸೆಂಬರ್ 14, 2019
21 °C

ಕರ್ನಾಟಕ 5.966 ಟಿಎಂಸಿ ಕಾವೇರಿ ನೀರು ಹರಿಸುವುದು ಬಾಕಿ; ತಮಿಳುನಾಡು ಸರ್ಕಾರದಿಂದ ಸುಪ್ರೀಂಗೆ ಅರ್ಜಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಕರ್ನಾಟಕ 5.966 ಟಿಎಂಸಿ ಕಾವೇರಿ ನೀರು ಹರಿಸುವುದು ಬಾಕಿ; ತಮಿಳುನಾಡು ಸರ್ಕಾರದಿಂದ ಸುಪ್ರೀಂಗೆ ಅರ್ಜಿ

ನವದೆಹಲಿ: ಕರ್ನಾಟಕದಿಂದ ಕೂಡಲೇ ಕಾವೇರಿ ನೀರು ಹರಿಸಲು ಸೂಚಿಸುವಂತೆ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದೆ.

ಕಾವೇರಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್‌ ಆದೇಶವನ್ನು  ಕರ್ನಾಟಕ ಸರಿಯಾಗಿ ಪಾಲನೆ ಮಾಡಿಲ್ಲ. ತಮಿಳುನಾಡಿಗೆ ಇನ್ನೂ 5.966 ಟಿಎಂಸಿ ನೀರು ಹರಿಸುವುದು ಬಾಕಿ ಇರುವುದಾಗಿ ಕೋರ್ಟ್‌ಗೆ ತಮಿಳುನಾಡು ಸರ್ಕಾರ ತಿಳಿಸಿದೆ.

ಕಾವೇರಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿರುವುದಾಗಿ ಎನ್‌ಎನ್‌ಐ ವರದಿ ಮಾಡಿದೆ.

ಪ್ರತಿಕ್ರಿಯಿಸಿ (+)