ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಪ್ಪಟ್ಟು ತೆರಿಗೆಯಿಂದ ಚಿತ್ರರಂಗದ ಅನೇಕರಿಗೆ ತೊಂದರೆ: ರಜನಿಕಾಂತ್‌

Last Updated 5 ಜುಲೈ 2017, 6:55 IST
ಅಕ್ಷರ ಗಾತ್ರ

ಚೆನ್ನೈ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಹೊರತುಪಡಿಸಿ, ಹೆಚ್ಚುವರಿಯಾಗಿ ಶೇ 30ರಷ್ಟು ಸ್ಥಳೀಯಾಡಳಿತ ತೆರಿಗೆ ವಿಧಿಸಿರುವ ತಮಿಳುನಾಡು ಸರ್ಕಾರದ ಕ್ರಮ ವಿರೋಧಿಸಿ, ಸೋಮವಾರದಿಂದ ರಾಜ್ಯದಾದ್ಯಂತ 1 ಸಾವಿರಕ್ಕೂ ಅಧಿಕ ಸಿನಿಮಾ ಮಂದಿರಗಳನ್ನು ಮುಚ್ಚಿ ಮುಷ್ಕರ ನಡೆಸಲಾಗುತ್ತಿದೆ.

ಸರ್ಕಾರದ ಕ್ರಮ ವಿರೋಧಿಸಿ ಚಲನಚಿತ್ರ ಮಂದಿರಗಳ ಮಾಲೀಕರು ಅನಿರ್ದಿಷ್ಟಾವಧಿವರೆಗೆ ಪ್ರತಿಭಟನೆ ಆರಂಭಿಸಿದ್ದಾರೆ.

ಸಿನಿಮಾ ಟಿಕೆಟ್‌ಗಳ ಮೇಲಿನ ತೆರಿಗೆ ಶೇ 58 ವಿಧಿಸಾಗಿದ್ದು, ಇದು ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆಯಾಗಿದೆ. ಸಿನಿಮಾ ವೀಕ್ಷಕರ ಮೇಲೂ ಇದು ಹೊರೆಯಾಗಿದೆ. ಪ್ರತಿಭಟನೆಯಿಂದಾಗಿ ನಿತ್ಯ ₹20 ಕೋಟಿಯಷ್ಟು ನಷ್ಟವಾಗಿದೆ ಎಂದು ರಾಜ್ಯ ಸಿನಿಮಾ ಮಂದಿರ ಮಾಲೀಕರು ಹಾಗೂ ವಿತರಕರ ಸಂಘದ ಅಧ್ಯಕ್ಷ ಅಬಿರಾಮಿ ರಾಮನಾಥನ್‌ ತಿಳಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಕೋರಿ ರಾಮನಾಥನ್‌ ಅವರು ಮುಖ್ಯಮಂತ್ರಿ ಎಡಪಾಡಿ ಕೆ ಪಳನಿಸ್ವಾಮಿ ಹಾಗೂ ಹಣಕಾಸು ಸಚಿವ ಡಿ. ಜಯಕುಮಾರ್‌ ಭೇಟಿಯಾಗಿ ಮನವಿ ಸಲ್ಲಿಸಿದರು.

ಸಿನಿಮಾ ಮಂದಿರಗಳಲ್ಲಿ ಜಿಎಸ್‌ಟಿ ಜೊತೆಗೆ ₹100ರ ಒಳಗಿನ ಟಿಕೆಟ್‌ಗಳಿಗೆ ಶೇ 18ರಷ್ಟು ತೆರಿಗೆ ವಿಧಿಸಲಾಗುತ್ತದೆ. ₹100ಕ್ಕಿಂತ ಹೆಚ್ಚಿರುವ ಮಲ್ಟಿಪ್ಲೆಕ್ಸ್‌ ಟಿಕೆಟ್‌ಗಳಿಗೆ ಶೇ 28ರಷ್ಟು ತೆರಿಗೆ ವಿಧಿಸಲಾಗುತ್ತದೆ. ಆದರೆ, ಜಿಎಸ್‌ಟಿ ಜತೆಗೆ ಸ್ಥಳೀಯಾಡಳಿತ ತೆರಿಗೆ ಹೇರಿದರೆ, ಟಿಕೆಟ್‌ ಮೌಲ್ಯದ ಅರ್ಧದಷ್ಟು ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಅಧಿಕಾರಿಗಳು ವಿವರಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT