ಭಾನುವಾರ, ಡಿಸೆಂಬರ್ 8, 2019
21 °C

‘ಸುಕ್ರಿ ಗೌಡ ಚಿಕಿತ್ಸೆ ವೆಚ್ಚ ಭರಿಸಲು ಕ್ರಮ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಸುಕ್ರಿ ಗೌಡ ಚಿಕಿತ್ಸೆ ವೆಚ್ಚ ಭರಿಸಲು ಕ್ರಮ’

ಕಾರವಾರ: ‘ಜಾನಪದ ಕಲಾವಿದೆ ಅಂಕೋಲಾದ ಸುಕ್ರಿ ಬೊಮ್ಮು ಗೌಡ ಅವರು ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಭರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸುಕ್ರಿ ಅವರ ಕಲಾಸೇವೆ ನಾಡಿಗೆ ಇನ್ನೂ ಬಹುಕಾಲ ಅಗತ್ಯವಾಗಿದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕು. ಅವರ ಕಲಾಸಾಧನೆ ನಿರಂತರವಾಗಿ ಮುಂದುವರಿಯಬೇಕು’ ಎಂದು ಆಶಿಸಿದ್ದಾರೆ.

ಪ್ರತಿಕ್ರಿಯಿಸಿ (+)