ಶುಕ್ರವಾರ, ಡಿಸೆಂಬರ್ 13, 2019
17 °C

ರಾಘವೇಶ್ವರ ಶ್ರೀ ಕೆಳಗಿಳಿಸಲು ಪಿಐಎಲ್‌: ಆಕ್ಷೇಪಣೆಗೆ ಸಮಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಘವೇಶ್ವರ ಶ್ರೀ ಕೆಳಗಿಳಿಸಲು  ಪಿಐಎಲ್‌: ಆಕ್ಷೇಪಣೆಗೆ ಸಮಯ

ಬೆಂಗಳೂರು: ‘ರಾಘವೇಶ್ವರ ಶ್ರೀಗಳನ್ನು ಪೀಠದಿಂದ ಕೆಳಗಿಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್‌) ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಬೇಕು’ ಎಂದು ಮಠದ ವಕೀಲರು ಹೈಕೋರ್ಟ್‌ಗೆ ಬುಧವಾರ ಮನವಿ ಮಾಡಿದರು.

ಇದನ್ನು ಮನ್ನಿಸಿದ ನ್ಯಾಯಮೂರ್ತಿ ಜಯಂತ್ ಪಟೇಲ್‌ ಹಾಗೂ ನ್ಯಾಯಮೂರ್ತಿ ಸುಜಾತಾ ಅವರಿದ್ದ ವಿಭಾಗೀಯ ನ್ಯಾಯಪೀಠ ಇದೇ 14ಕ್ಕೆ ವಿಚಾರಣೆ ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ ಎಸ್‌.ಕೆ. ಮುಖರ್ಜಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಇತ್ತೀಚೆಗಷ್ಟೇ ಈ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದಿತ್ತು.

‘ಮಠದಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆಯಲು ಕೂಡಲೇ ಆಡಳಿತಾಧಿಕಾರಿ ನೇಮಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಎದುರ್ಕುಳ ಈಶ್ವರಭಟ್‌ ಸೇರಿದಂತೆ ಆರು ಜನ ಸಲ್ಲಿಸಿರುವ ಪಿಐಎಲ್‌ ಇದಾಗಿದೆ.

ಪ್ರತಿಕ್ರಿಯಿಸಿ (+)