ಬುಧವಾರ, ಫೆಬ್ರವರಿ 19, 2020
24 °C

ಹುಬ್ಬಳ್ಳಿ ಬಳಿ ಕೆರೆಗೆ ಉರುಳಿದ ಬಸ್: 30 ಪ್ರಯಾಣಿಕರು ಅಪಾಯದಿಂದ ಪಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ ಬಳಿ ಕೆರೆಗೆ ಉರುಳಿದ ಬಸ್: 30 ಪ್ರಯಾಣಿಕರು ಅಪಾಯದಿಂದ ಪಾರು

ಹುಬ್ಬಳ್ಳಿ: ನಗರದ ಹೊರವಲಯದ ಪುನಾ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವರೂರ ಕ್ರಾಸ್ ಬಳಿ ಮಾಜಿ ಸಚಿವ ಬಸವರಾಜ ಹೊರಟ್ಟಿ ಪಾರ್ಮ್ ಹೌಸ್‌ನ ಕೆರೆಗೆ ಖಾಸಗಿ ಬಸ್‌ ಉರುಳಿ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಬಸ್‌ ಬೆಂಗಳೂರಿನಿಂದ ಮುಂಬೈಗೆ ಹೊರಟಿತ್ತು. ಬಸ್‌ನಲ್ಲಿದ್ದ 30 ಪ್ರಯಾಣಿಕರಲ್ಲಿ ಹಲರಿಗೆ ಸಣ್ಣ ಪುಟ್ಟಗಾಯ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅವಘಡ ಸಂಭವಿಸಿದ್ದು, ದೊಡ್ಡ ಪ್ರಮಾಣದ ದುರಂತವೊಂದು ತಪ್ಪಿದೆ.

ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)