ಸೋಮವಾರ, ಡಿಸೆಂಬರ್ 16, 2019
18 °C

ಆಗಸ್ಟ್ ಎರಡನೇ ವಾರ ಮೋಡ ಬಿತ್ತನೆ ಆರಂಭ: ಸಚಿವ ಕೃಷ್ಣ ಬೈರೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಗಸ್ಟ್ ಎರಡನೇ ವಾರ ಮೋಡ ಬಿತ್ತನೆ ಆರಂಭ: ಸಚಿವ ಕೃಷ್ಣ ಬೈರೇಗೌಡ

ಬಾಗಲಕೋಟೆ: ಆಗಸ್ಟ್ ಎರಡನೇ ವಾರ ರಾಜ್ಯದಲ್ಲಿ ಮೋಡ ಬಿತ್ತನೆ ಕಾರ್ಯ ಆರಂಭಿಸಲು ಬುಧವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಕೊರತೆ ಇರುವ ಕಾರಣ ಜವಾಬ್ದಾರಿಯುತ ಸರ್ಕಾರವಾಗಿ ಮೋಡಬಿತ್ತನೆ ಕೈಗೊಳ್ಳಲಾಗುತ್ತಿದೆ. ವಿದೇಶದಿಂದ ಮೂರು ರೇಡಾರ್ ಹಾಗೂ ಎರಡು ವಿಮಾನಗಳು ಬರಲಿವೆ. ಹುಬ್ಬಳ್ಳಿ ಹಾಗೂ ಬೆಂಗಳೂರು ವಿಮಾನನಿಲ್ದಾಣಗಳಿಂದ ಕಾರ್ಯಾಚರಣೆ ನಡೆಸಲಿವೆ ಎಂದರು.

ಯಾವುದೇ ಕೆಲಸಕ್ಕೆ ಪರ ವಿರೋಧಗಳು ಸಹಜ. ಹಾಗಾಗಿ, ಕೆಲವರು ಈ ಕಾರ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಪ್ರತಿಕ್ರಿಯಿಸಿದರು.

ಈ ಹಿಂದೆ ರಾಜ್ಯದಲ್ಲಿ ನಡೆದ ಮೋಡ ಬಿತ್ತನೆ ಕಾರ್ಯ ಯಶಸ್ವಿಯಾಗಿಲ್ಲ. ಅದೊಂದು ಅವೈಜ್ಞಾನಿಕ ಕ್ರಮ ಎಂಬುದು ವಿರೋಧಿಸುವವರ ಅಭಿಪ್ರಾಯವಾಗಿದೆಯಲ್ಲ ಎಂಬ ಪ್ರಶ್ನೆಗೆ ಕೋಪಗೊಂಡ ಸಚಿವರು. ತಿಳಿದುಕೊಂಡು ಮಾತನಾಡಿ ಎಂದು ಹೇಳಿ ಸ್ಥಳದಿಂದ ನಿರ್ಗಮಿಸಿದರು.

ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಅನುಮೋದನೆ

ಬೆಂಗಳೂರು:
ಕಾವೇರಿ, ಮಲಪ್ರಭಾ ಹಾಗೂ ತುಂಗಾಭದ್ರಾ ಜಲಾನಯನ ಪ್ರದೇಶದಲ್ಲಿ 60 ದಿನಗಳ ಕಾಲ ಮೋಡ ಬಿತ್ತನೆ ಮಾಡುವ ಯೋಜನೆಗೆ ರಾಜ್ಯ ಸರ್ಕಾರ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.

ಸರ್ಕಾರ ಕರೆದಿದ್ದ ಟೆಂಡರ್‌ನಲ್ಲಿ ಹೊಯ್ಸಳ ಪ್ರವೇಟ್‌ ಲಿಮಿಟೆಡ್‌ ಹಾಗೂ ಖ್ಯಾತಿ ಕ್ಲೈಮೇಟ್‌ ಕನ್ಸಲ್ಟೆಂಟ್‌ ಸಂಸ್ಥೆಗಳು ಪಾಲ್ಗೊಂಡಿದ್ದವರು.

ಹೊಯ್ಸಳ ಪಂಪೆನಿಯು ₹35 ಕೋಟಿ ವೆಚ್ಚದಲ್ಲಿ ಮೋಡ ಬಿತ್ತನೆ ಮಾಡುವುದಾಗಿ ಹೇಳಿತ್ತು. ಚೌಕಾಸಿ ನಡೆಸಿ ₹30 ಕೋಟಿ ವೆಚ್ಚದಲ್ಲಿ ಟೆಂಡರ್‌ ಅಂತಿಮಗೊಳಿಸಲಾಗಿದೆ.

ಪ್ರತಿಕ್ರಿಯಿಸಿ (+)