ಭಾನುವಾರ, ಡಿಸೆಂಬರ್ 8, 2019
21 °C

ಮೂವರು ಮಕ್ಕಳ ಎದುರು ತಾಯಿಯ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಮೂವರು ಮಕ್ಕಳ ಎದುರು ತಾಯಿಯ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ

ವಿಶಾಕಪಟ್ಟಣ: ಮೂವತ್ತೈದು ವರ್ಷದ ಮಹಿಳೆಯೊಬ್ಬರನ್ನು ಆಕೆಯ ಮೂವರು ಮಕ್ಕಳ ಎದುರೇ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಗರದಲ್ಲಿ ನಡೆದಿದೆ. 

ನಗರದ ಇಬ್ಬರು ಪುರುಷರು ಮನೆಯಲ್ಲಿ ನನ್ನ ಮೂವರು ಮಕ್ಕಳ ಮುಂದೆಯೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಇಬ್ಬರು ಆರೋಪಿಗಳು ಹಾಗೂ ಇಬ್ಬರು ಅವರ ಸಹಚರನ್ನು ಬಂಧಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಹಿತಿ ನೀಡಿದ್ದಾರೆ.

ಈ ಸಂಬಂಧ ಮಹಿಳೆ ಗಾಜುವಾಕ ಠಾಣೆಗೆ ಮಂಗಳವಾರ ದೂರು ನೀಡಿದ್ದು, ಸೋಮವಾರ ಸಂಜೆ ಪತಿ ಕೆಸಲಕ್ಕೆ ಮನೆಯಿಂದ ಹೊರಗೆ ಹೋಗಿದ್ದಾಗ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿಸಿದ್ದಾರೆ.

ಮಕ್ಕಳನ್ನೊಳಗೊಂಡ ನಾಲ್ವರ ಗುಂಪು ತನ್ನ ಮನೆಯನ್ನೂ ಹಾನಿಗೊಳಿಸಿದೆ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.

‘ಇಬ್ಬರು ಪುರುಷರು ಮಹಿಳೆಯನ್ನು ಆಕೆಯ ಮಕ್ಕಳ ಮುಂದೆಯೇ ಅತ್ಯಾಚಾರ ಎಸಗಿದ್ದಾರೆ. ಜತೆಗೆ, ಈ ವಿಷಯವನ್ನು ಯಾರ ಮುಂದೆಯಾದರೂ ಬಹಿರಂಗಪಡಿಸಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಮಹಿಳೆಗೆ ಬೆದರಿಕೆ ಹಾಕಿದ್ದಾರೆ ಎಂದು ಠಾಣೆಯ ಎಸ್‌ಐ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ 376ರ ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)