ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಯಾವುದೇ ಭಾಗದಲ್ಲಿ ಕನ್ನಡ ಮಾಧ್ಯಮದಲ್ಲಿ ಅಧ್ಯಯನ; ಸರ್ಕಾರಿ ಹುದ್ದೆಗಳಲ್ಲಿ ಶೇ 5 ಮೀಸಲಾತಿ

Last Updated 6 ಜುಲೈ 2017, 15:29 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ಯಾವುದೇ ಭಾಗದಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿರುವ ದೇಶದ ಪತ್ರಿಯೊಬ್ಬ ಅಭ್ಯರ್ಥಿಗೂ ರಾಜ್ಯ ನಾಗರಿಕ ಸೇವೆಗಳ ನೇರ ನೇಮಕಾತಿಯಲ್ಲಿ ಶೇ 5 ರಷ್ಟು ಸಮತಳ ಮೀಸಲಾತಿ ಕಲ್ಪಿಸಲಾಗಿದೆ.

ಕರ್ನಾಟಕ ನಾಗರಿಕ ಸೇವಾ ನಿಯಮಗಳು 1977 ಕ್ಕೆ ತಿದ್ದುಪಡಿ ತಂದು 9 (1) (ಸಿ) ಸೇರ್ಪಡೆಗೊಳಿಸಿ 2001ರ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅಡಿಯಲ್ಲಿ ಈ ಮೀಸಲಾತಿ ನೀಡಲಾಗಿದ್ದು, ನಾಗರಿಕ ಸೇವಾ ಹುದ್ದೆಗಳಿಗೆ ನೇರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಟ್ಟುನಿಟ್ಟಾಗಿ ಪರಿಗಣಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಿದೆ.

ಈ ಅವಕಾಶವನ್ನು ದೇಶದ ಯಾವುದೇ ಭಾಗದಲ್ಲಿ ಒಂದನೇ ತರಗತಿಯಿಂದ 10ನೇ ತರಗತಿವರೆಗೂ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದ ಪ್ರತಿಯೊಬ್ಬ ಅಭ್ಯರ್ಥಿಯೂ ಪಡೆಯಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT