ಬುಧವಾರ, ಡಿಸೆಂಬರ್ 11, 2019
25 °C

ರಾಜ್ಯಸಭಾ ಮಾಜಿ ಸದಸ್ಯ ಲಕ್ಷ್ಮಣ ಗೌಡ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯಸಭಾ ಮಾಜಿ ಸದಸ್ಯ ಲಕ್ಷ್ಮಣ ಗೌಡ ನಿಧನ

ಮೂಡಿಗೆರೆ: ರಾಜ್ಯಸಭೆಯ ಮಾಜಿ ಸದಸ್ಯ ಉರ್ವಿನ್‌ಖಾನ್‌ ಲಕ್ಷ್ಮಣ ಗೌಡ (97) ಗುರುವಾರ ಮುಂಜಾನೆ ತಾಲ್ಲೂಕಿನ ಉರ್ವಿನ್‌ಖಾನ್‌ ಎಸ್ಟೇಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.

ಅವರಿಗೆ ಪತ್ನಿ ಲಕ್ಷ್ಮಮ್ಮ ಹಾಗೂ ಮೂವರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಗುರುವಾರ ಸಂಜೆ ಎಸ್ಟೇಟಿನಲ್ಲಿ ನಡೆಸಲಾಯಿತು.

ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು 1967ರಲ್ಲಿ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು.

ಪ್ರತಿಕ್ರಿಯಿಸಿ (+)