ಸೋಮವಾರ, ಡಿಸೆಂಬರ್ 9, 2019
25 °C

ಜಾನಪದ ಕಲಾವಿದೆ ಸುಕ್ರಿ‌ ಬೊಮ್ಮುಗೌಡ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಾನಪದ ಕಲಾವಿದೆ ಸುಕ್ರಿ‌ ಬೊಮ್ಮುಗೌಡ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಕಾರವಾರ: ಜಾನಪದ ಕಲಾವಿದೆ ಸುಕ್ರಿ‌ ಬೊಮ್ಮು ಗೌಡ ಅವರು ಅನಾರೋಗ್ಯದಿಂದ ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

ಬನವಾಸಿ ಕಲ್ಯಾಣ ಆಶ್ರಮ ಸಂಸ್ಥೆಯು ಬೆಂಗಳೂರಿನಲ್ಲಿ ಜೂನ್ 1ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಕ್ರಜ್ಜಿ ಭಾಗಿಯಾಗಿದ್ದರು. ಬಳಿಕ ಶ್ವಾಸಕೋಶ ಸಮಸ್ಯೆಯಿಂದ ಜೂನ್ 2ರಂದು ಬೆಂಗಳೂರಿನ ತಿಲಕ್ ನಗರದಲ್ಲಿನ ಸಾಗರ ಆಸ್ಪತ್ರೆಗೆ ದಾಖಲಾಗಿದ್ದರು.

ಅಲ್ಲಿಂದ ಸುಕ್ರಜ್ಜಿಯ ಮನವಿ ಮೇರೆಗೆ ಇಲ್ಲಿನ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಬೆಳಿಗ್ಗೆ 4ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

'ಸುಕ್ರಿ ಬೊಮ್ಮು ಗೌಡ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತಿದ್ದು, ಅಗತ್ಯ ಚಿಕಿತ್ಸೆ ನೀಡಲಾಗುತಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತಿದ್ದಾರೆ' ಎಂದು ಜಿಲ್ಲಾ ಸರ್ಜನ್ ಡಾ.ಶಿವಾನಂದ ಕುಡ್ತಳಕರ ಅವರು 'ಪ್ರಜಾವಾಣಿ'ಗೆ ತಿಳಿಸಿದರು.

ಪ್ರತಿಕ್ರಿಯಿಸಿ (+)