ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ರೈತರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂಕೋರ್ಟ್‌ ಆದೇಶ

Last Updated 7 ಜುಲೈ 2017, 11:29 IST
ಅಕ್ಷರ ಗಾತ್ರ

ನವದೆಹಲಿ: ಬರ ಪರಿಸ್ಥಿತಿಯಿಂದಾಗಿ ಸಂಕಷ್ಟದಲ್ಲಿರುವ ತಮಿಳುನಾಡು ರೈತರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಬ್ಯಾಂಕ್‌ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ತಮಿಳುನಾಡು ಸರ್ಕಾರಕ್ಕೆ ಸುಪ್ರೀಕೋರ್ಟ್‌ ಆದೇಶ ನೀಡಿದೆ.

‘ಯಾವುದೇ ಬ್ಯಾಂಕ್‌ಗಳು ರೈತರ ವಿರುದ್ಧ ದಬ್ಬಾಳಿಕೆಯ ಕ್ರಮ ಕೈಗೊಳ್ಳದಂತೆ ಮುಂಜಾಗ್ರತೆ ವಹಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ನ್ಯಾಯಪೀಠ, ‘ಬ್ಯಾಂಕ್‌ಗಳ ದಬ್ಬಾಳಿಕೆಯ ಕ್ರಮದಿಂದಾಗಿ ರೈತರ ಘನತೆ, ಗೌರವಕ್ಕೆ ಧಕ್ಕೆ ಉಂಟಾಗಲಿದೆ’ ಎಂದು ಸಹ ಸೂಚಿಸಿದೆ.

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗುತ್ತಿರುವುದಕ್ಕೆ ಸಂಬಂಧಿಸಿದಂತೆ, ತಮಿಳ್ ನಾಡು ಸೆಂಟರ್‌ ಫಾರ್‌ ಪಬ್ಲಿಕ್‌ ಇಂಟರೆಸ್ಟ್‌ ಲಿಟಿಗೇಷನ್‌ ಎಂಬ ಎನ್‌ಜಿಒ(ಸ್ವಯಂ ಸೇವಾ ಸಂಸ್ಥೆ) ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತ್ತು.

ತಮಿಳುನಾಡು ರೈತರ ಪರ ವಾದಿಸಿದ ವಕೀಲ ಆರ್‌.ರಾಜಾರಾಮನ್‌ ಅವರು, ‘ಸಣ್ಣ ಪ್ರಮಾಣದಲ್ಲಿ ಸಾಲ ಪಡೆದು ಈಗಾಗಲೇ ಸಂಕಷ್ಟದಲ್ಲಿರುವ ರೈತರ ವಿರುದ್ಧವೂ ಹಲವು ಬ್ಯಾಂಕ್‌ಗಳಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಆತ್ಮಹತ್ಯೆ ಪ್ರಮಾಣ ಹೆಚ್ಚುತ್ತಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

ವಾದ ಆಲಿಸಿದ ಪೀಠ, ‘ಈ ವಿಚಾರದಲ್ಲಿ ರಾಜ್ಯ ಸರ್ಕಾರ ಮಧ್ಯಸ್ಥಿಕೆ ವಹಿಸುವ ಜತೆಗೆ ರೈತರ ಬೆಳೆಯನ್ನು ಕನಿಷ್ಟ ಬೆಲೆಗಾದರೂ ಖರೀದಿಸಬೇಕು’ ಎಂದು ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT