ಶುಕ್ರವಾರ, ಡಿಸೆಂಬರ್ 13, 2019
20 °C

ಕಾನೂನು ಸುವ್ಯವಸ್ಥೆ ಹದಗೆಡೆಸುವ ಸಂಘಟನೆಗಳ ವಿರುದ್ಧ ಕಠಿಣ ಕ್ರಮ: ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾನೂನು ಸುವ್ಯವಸ್ಥೆ ಹದಗೆಡೆಸುವ ಸಂಘಟನೆಗಳ ವಿರುದ್ಧ ಕಠಿಣ ಕ್ರಮ: ಸಿಎಂ

ಮಂಗಳೂರು: ಕಾನೂನು ಸುವ್ಯವಸ್ಥೆ ಹದಗೆಡೆಸುವ ಪ್ರಯತ್ನವನ್ನು ಕೆಲ ಸಂಘಟನೆಗಳು ಮಾಡುತ್ತಿವೆ. ಅವರ ಪ್ರಯತ್ನ ಫಲಿಸಲ್ಲ. ಅಂತಹ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಹೊರವಲಯದ ಅಡ್ಯಾರ್ ಗಾರ್ಡನ್‌ನಲ್ಲಿ ಶುಕ್ರವಾರ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳು ಮತ್ತು ವಿವಿಧ ಚುನಾವಣೆಗಳಲ್ಲಿ ಸೋತ ಅಭ್ಯರ್ಥಿಗಳ ಸಮಾವೇಶ ಆರಂಭಕ್ಕೂ ಮುನ್ನ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಸಮಾವೇಶ ಆರಂಭ 

ಅಡ್ಯಾರ್ ಗಾರ್ಡನ್‌ನಲ್ಲಿ ಮಧ್ಯಾಹ್ನದ ಬಳಿಕ ಸಮಾವೇಶ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಸ್.ಆರ್.ಪಾಟೀಲ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

 

ಪ್ರತಿಕ್ರಿಯಿಸಿ (+)