ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಇಲಾಖೆ ಆನ್‌ಲೈನ್‌ ಪರೀಕ್ಷಾ ಪದ್ದತಿಯಿಂದ ಉಳಿದವು 4 ಲಕ್ಷ ಮರ, 319ಕೋಟಿ ಎ4 ಶೀಟ್‌!

Last Updated 7 ಜುಲೈ 2017, 13:27 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ರೈಲ್ವೆ ಇಲಾಖೆ ತನ್ನ ನೇಮಕಾತಿ ಸಂದರ್ಭದಲ್ಲಿ ನಡೆಸುವ ಪರೀಕ್ಷಾ ವಿಧಾನವನ್ನು ಆನ್‌ಲೈನ್‌ಗೆ ಬದಲಿಸಿಕೊಂಡಿದೆ. ಇದರಿಂದಾಗಿ ಅಂದಾಜು 4ಲಕ್ಷ ಮರಗಳು ಹಾಗೂ 319ಕೋಟಿ ಎ4 ಗಾತ್ರ ಹಾಳೆಗಳು ಉಳಿತಾಯವಾಗಿವೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಈ ಹಿಂದೆ ನೇಮಕಾತಿ ಸಂದರ್ಭದಲ್ಲಿ ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು. ಹಲವು ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಮುದ್ರಿಸಬೇಕಿದ್ದ ಕಾರಣ ಅಧಿಕ ಪ್ರಮಾಣದ ಕಾಗದ ಬಳಕೆ ಮಾಡಲಾಗುತ್ತಿತ್ತು. ಇದಕ್ಕಾಗಿ ಮರಗಳನ್ನು ಅತಿಯಾಗಿ ಅವಲಂಭಿಸಲಾಗಿತ್ತು.

ಇದನ್ನು ಗಮನದಲ್ಲಿರಿಸಿ, ಸದ್ಯ ಖಾಲಿಯಿರುವ ಒಟ್ಟು 14,000 ಹುದ್ದೆಗಳ ನೇಮಕಾತಿಗೆ ರೈಲ್ವೆ ಇಲಾಖೆ ಆನ್‌ಲೈನ್‌ ಪರೀಕ್ಷೆ ಆಯೋಜಿಸುವ ತೀರ್ಮಾನ ಕೈಗೊಂಡಿತ್ತು. 92ಲಕ್ಷ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು.

351 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾದ ಪ್ರಾಥಮಿಕ ಪರೀಕ್ಷೆಯಲ್ಲಿ 2.73 ಲಕ್ಷ ಮಂದಿ ಆಯ್ಕೆಯಾಗಿದ್ದರು. ಆಯ್ಕೆಯಾದ ಆಭ್ಯರ್ಥಿಗಳಿಗೆ 2017 ಜನವರಿಯಲ್ಲಿ ಎರಡನೇ ಹಂತದ ಪರೀಕ್ಷೆಯನ್ನೂ ನಡೆಸಲಾಗಿತ್ತು. ಸದ್ಯ 45ಸಾವಿರ ಅಭ್ಯರ್ಥಿಗಳು ಅಂತಿಮ ಪರೀಕ್ಷೆಗೆ ಆಯ್ಕೆಯಾಗಿದ್ದು, ಅವರಿಗೆ ದೈಹಿಕ ಹಾಗೂ ತಾಂತ್ರಿಕ ಕೌಶಲ ಪರೀಕ್ಷೆಯನ್ನು ಜೂನ್‌ 29, 30ರಂದು ನಡೆಸಲಾಗಿದೆ’ ಎಂದು ರೈಲ್ವೆ ಸಚಿವಾಲಯದ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಆನ್‌ಲೈನ್‌ ಪದ್ದತಿಯನ್ನು ಅನುಸರಿಸಿದ ಬಳಿಕ ಆಯ್ಕೆ ಪ್ರಕ್ರಿಯೆಗಾಗಿ ವ್ಯಯಿಸಲಾಗುತ್ತಿದ್ದ ಸಮಯ ಹಾಗೂ ಸಂಪನ್ಮೂಲಗಳ ಪ್ರಮಾಣದಲ್ಲಿ ಗಣನೀಯ ಉಳಿತಾಯಕ್ಕೆ ಸಹಕಾರಿಯಾಗಿದೆ. ಜತೆಗೆ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಅಕ್ರಮವನ್ನು ತಡೆದು ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲು ಸಾಧ್ಯವಾಗಿದೆ.

ಇದು ‘ವಿಶ್ವದ ಅತಿದೊಡ್ಡ ಆನ್‌ಲೈನ್‌ ಪರೀಕ್ಷಾ ವ್ಯವಸ್ಥೆ’ ಎಂದಿರುವ ಇಲಾಖೆ, ಆಯ್ಕೆಯಾಗುವ 14ಸಾವಿರ ಅಭ್ಯರ್ಥಿಗಳ ದಾಖಲೆ ಪರಿಶೀಲನೆಯನ್ನು ಸೆಪ್ಟೆಂಬರ್‌ನಲ್ಲಿ ನಡೆಸುವುದಾಗಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT