ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಟ್ವಾಳದಲ್ಲಿ ಇರಿತಕ್ಕೊಳಗಾಗಿದ್ದ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್ ಮಡಿವಾಳ ಸಾವು

Last Updated 7 ಜುಲೈ 2017, 14:52 IST
ಅಕ್ಷರ ಗಾತ್ರ

ಬಂಟ್ವಾಳ: ತಾಲ್ಲೂಕಿನ ಬಿ.ಸಿ. ರೋಡ್ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್‌ ರಸ್ತೆ ಬಳಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ಶರತ್‌ ಮಡಿವಾಳ (30) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಉದಯ ಲಾಂಡ್ರಿ ಮಾಲೀಕ ತನಿಯಪ್ಪ ಮಡಿವಾಳ ಅವರ ಪುತ್ರ, ಆರ್‌ಎಸ್ಎಸ್ ಕಾರ್ಯಕರ್ತ ಶರತ್ ಅವರಿಗೆ ದುಷ್ಕರ್ಮಿಗಳು ಮಂಗಳವಾರ ರಾತ್ರಿ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು.

[related]

ಇರಿತಕ್ಕೊಳಗಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶರತ್‌ ಅವರನ್ನು ಹಣ್ಣಿನ ವ್ಯಾಪಾರಿಯಾಗಿರುವ ಅಬ್ದುಲ್ ರವೂಫ್ ತಮ್ಮ ರಿಕ್ಷಾದಲ್ಲಿ ತುಂಬೆ ಫಾದರ್ ಮುಲ್ಲರ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಬಳಿಕ ಅಲ್ಲಿನ ಆಂಬುಲೆನ್ಸ್ ಮೂಲಕ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಸಾಗಿಸಿದ್ದರು.

ಹಲ್ಲೆಯಿಂದ ತಲೆಯ ಹಿಂಬದಿ, ಬೆನ್ನು, ಕೆನ್ನೆ, ಕೊರಳು ಮತ್ತಿತರ ಕಡೆ ತೀವ್ರ ಗಾಯವಾಗಿರುವ ‌ಶರತ್ ಕುಮಾರ್ ಅವರ ರಕ್ತದೊತ್ತಡ ಇಳಿಮುಖವಾಗಿದ್ದು. ಅವರಿಗೆ ಕಿಡ್ನಿ ಸಮಸ್ಯೆಯೂ ಕಾಣಿಸಿಕೊಂಡಿತ್ತು, ಶರತ್ ಅವರ ಜೀವ ಉಳಿಸಲು ವೈದ್ಯರು ಶತಾಯಗತಾಯ ಪ್ರಯತ್ನಿಸಿದ್ದರೂ ಚಿಕಿತ್ಸೆ ಫಲಕಾರಿಯಾಗಿಲ್ಲ ಎಂದು ಸುದ್ದಿವಾಹಿನಿ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT