ಭಾನುವಾರ, ಡಿಸೆಂಬರ್ 8, 2019
21 °C

ಕುಸ್ತಿ ತಂಡದಲ್ಲಿ ಸಾಕ್ಷಿ, ವಿನೇಶ್‌ ಗೆ ಸ್ಥಾನ

Published:
Updated:
ಕುಸ್ತಿ ತಂಡದಲ್ಲಿ ಸಾಕ್ಷಿ, ವಿನೇಶ್‌ ಗೆ ಸ್ಥಾನ

ಲಖನೌ : ಅನುಭವಿ ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್‌ ಮತ್ತು ವಿನೇಶ್‌ ಪೋಗಟ್‌ ಅವರು ಮುಂದಿನ ತಿಂಗಳು ಪ್ಯಾರಿಸ್‌ನಲ್ಲಿ ನಡೆಯುವ ವಿಶ್ವ ಚಾಂಪಿಯನ್‌ಷಿಪ್‌ಗೆ ಭಾರತ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.

ಭಾರತ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಇತ್ತೀಚೆಗೆ ಲಖನೌದಲ್ಲಿ  ವಿವಿಧ ತೂಕದ ವಿಭಾಗಗಳಲ್ಲಿ ಆಯ್ಕೆ ಟ್ರಯಲ್ಸ್‌ ನಡೆಸಿತ್ತು. ಇದರ ಆಧಾರದಲ್ಲಿ ತಂಡವನ್ನು ಆಯ್ಕೆ ಮಾಡಲಾಗಿದೆ.

ರಿಯೊ ಒಲಿಂಪಿಕ್ಸ್‌ನ ಮಹಿಳೆಯರ 58 ಕೆ.ಜಿ ವಿಭಾಗದಲ್ಲಿ ಕಂಚು ಗೆದ್ದು ಚಾರಿತ್ರಿಕ ಸಾಧನೆ ಮಾಡಿದ್ದ ಸಾಕ್ಷಿ ಅವರು   ಹೋದ ತಿಂಗಳು ನಡೆದಿದ್ದ ಏಷ್ಯನ್‌ ಚಾಂಪಿಯನ್‌ಷಿಪ್‌ನಲ್ಲಿ 60ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿ ಬೆಳ್ಳಿಯ ಪದಕ ಜಯಿಸಿದ್ದರು.ವಿನೇಶ್‌ ಅವರು ಏಷ್ಯನ್‌ ಚಾಂಪಿ ಯನ್‌ಷಿಪ್‌ನ 55ಕೆ.ಜಿ. ವಿಭಾಗದಲ್ಲಿ ಬೆಳ್ಳಿಗೆ ಕೊರಳೊಡ್ಡಿದ್ದರು.

ಅವರು ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ 48 ಕೆ.ಜಿ. ವಿಭಾಗದಲ್ಲಿ ಭಾರತದ ಸವಾಲು ಎತ್ತಿಹಿಡಿಯಲಿದ್ದಾರೆ.ಪೋಗಟ್‌ ಸಹೋದರಿಯರಾದ ಗೀತಾ ಮತ್ತು  ಬಬಿತಾ ಅವರು ಟ್ರಯಲ್ಸ್‌ ನಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿ ಅವ ರನ್ನು ಆಯ್ಕೆಗೆ ಪರಿಗಣಿಸಿಲ್ಲ.  ರಿತು ಮತ್ತು ಸಂಗೀತಾ ಅವರು ಚಾಂಪಿಯನ್‌ಷಿಪ್‌ಗೆ ಅರ್ಹತೆ ಗಳಿಸಲು ವಿಫಲರಾಗಿದ್ದರು.

ಪ್ರತಿಕ್ರಿಯಿಸಿ (+)