ಭಾನುವಾರ, ಡಿಸೆಂಬರ್ 15, 2019
18 °C

ಸಿಂಧುಗೆ ವರ್ಷದ ಕ್ರೀಡಾಪಟು ಪ್ರಶಸ್ತಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಸಿಂಧುಗೆ ವರ್ಷದ  ಕ್ರೀಡಾಪಟು ಪ್ರಶಸ್ತಿ

ಮುಂಬೈ :  ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರಿಗೆ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾರುತಿ ಸುಜುಕಿ ವರ್ಷದ ಕ್ರೀಡಾಪಟು ಪುರಸ್ಕಾರ ಪ್ರದಾನ ಮಾಡಲಾಯಿತು.

‘ಸ್ಪೋರ್ಟ್ಸ್‌ ಇಲಸ್ಟ್ರೇಟೆಡ್ ಇಂಡಿಯಾ’ ನಿಯತಕಾಲಿಕೆ ಆಯೋಜಿ ಸಿದ್ದ ಕಾರ್ಯಕ್ರಮದಲ್ಲಿ ಕ್ರೀಡಾ ಸಾಧಕರನ್ನು ಗೌರವಿಸಲಾಯಿತು. ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದ ಪಿ.ವಿ. ಸಿಂಧು, ಅವರ ಕೋಚ್ ಗೋಪಿಚಂದ್, ಹಿರಿಯ ಅಥ್ಲೀಟ್ ಮಿಲ್ಕಾ ಸಿಂಗ್ ಅವರಿಗೆ ಪ್ರಶಸ್ತಿ ನೀಡಲಾಯಿತು.  ಒಲಿಂಪಿಯನ್ ಅಭಿನವ್ ಬಿಂದ್ರಾ ಅವರಿಗೆ ಜೀವಮಾನ ಸಾಧನೆ ಪುರಸ್ಕಾರ  ನೀಡಲಾಯಿತು. 

ಭಾರತ ಕ್ರಿಕೆಟ್ ತಂಡದ ಆಟಗಾರ, ಕರ್ನಾಟಕದ ಕೆ.ಎಲ್. ರಾಹುಲ್ ಅವರಿಗೆ ‘ಗೇಮ್‌ಚೇಂಜರ್’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೂನಿಯರ್ ಹಾಕಿ ತಂಡದ ನಾಯಕ ಹರ್ಜೀತ್ ಸಿಂಗ್, ಗೌರವ್ ಗಿಲ್, ಪ್ಯಾರಾ ಅಥ್ಲೀಟ್ ದೇವೇಂದ್ರ ಜಜಾರಿಯಾ, ಮರಿಯಪ್ಪನ್ ತಂಗವೇಲು, ವರುಣ್ ಭಾರತಿ, ದೀಪಾ ಮಲೀಕ್ ಅವರನ್ನೂ ಗೌರವಿಸಲಾಯಿತು. 

ಕ್ರೀಡೆ ಬೆಳವಣಿಗೆಗೆ ವಿಶೇಷ ಸೇವೆ ಸಲ್ಲಿಸಿದ ಮ್ಯಾಜಿಕ್ ಬಸ್ ಸಂಸ್ಥೆಯ ಸಿಇಒ ಜಯಂತ್ ರಸ್ತೋಗಿ, ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ, ಫುಟ್‌ಬಾಲ್ ಆಟಗಾರ ಭೈಚುಂಗ್ ಭುಟಿಯಾ, ಬಾಕ್ಸರ್ ಆಮಿರ್ ಖಾನ್, ಕ್ರಿಕೆಟಿಗ ಪ್ರಗ್ಯಾನ್ ಓಜಾ ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರತಿಕ್ರಿಯಿಸಿ (+)