ಶುಕ್ರವಾರ, ಡಿಸೆಂಬರ್ 13, 2019
20 °C

ಲಾಲೂ ಮಗಳ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ದಾಳಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಲಾಲೂ ಮಗಳ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ದಾಳಿ

ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮಗಳು ಮೀಸಾ ಭಾರತಿ ಅವರ ದೆಹಲಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶನಿವಾರ ಹಠಾತ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ದೆಹಲಿಯ ಹೊರವಲಯದಲ್ಲಿರುವ ಘಿಟೊರ್ನಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಶೋಧ ನಡೆಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತಿ ಅವರು ರಾಜ್ಯಸಭಾ ಸದಸ್ಯೆಯಾ‌ಗಿದ್ದು, ₹ 1,000 ಕೋಟಿ ಬೇನಾಮಿ ಆಸ್ತಿ ಗಳಿಕೆ ಪ್ರಕರಣ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿ ಕಳೆದ ತಿಂಗಳು ಅವರನ್ನು ತೆರಿಗೆ ಇಲಾಖೆ ಅಧಿಕಾರಿಗಳು ಐದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದರು.

ಶುಕ್ರವಾರವಷ್ಟೇ ಸಿಬಿಐ ಅಧಿಕಾರಿಗಳು ಲಾಲೂ ಪ್ರಸಾದ್ ಯಾದವ್ ಅವರ ಪಟ್ನಾದಲ್ಲಿನ ನಿವಾಸ ಮತ್ತು ಇತರ 12 ಕಡೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸಿದ್ದರು. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿ ಈ ದಾಳಿ ನಡೆಸಲಾಗಿತ್ತು.

ಪ್ರತಿಕ್ರಿಯಿಸಿ (+)