ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ

Last Updated 8 ಜುಲೈ 2017, 9:28 IST
ಅಕ್ಷರ ಗಾತ್ರ

ಲೀಸ್ಟರ್‌: ಸತತ ನಾಲ್ಕು ಪಂದ್ಯಗಳನ್ನು ಗೆದ್ದು ವಿಶ್ವಾಸದ ಚಿಲುಮೆಯಾಗಿರುವ ಭಾರತ ವನಿತೆಯರ ತಂಡ ವಿಶ್ವಕಪ್‌ ಪಂದ್ಯದಲ್ಲಿ ಶನಿವಾರ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.

ಟಾಸ್‌ ಗೆದ್ದ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಸತತ ಐದನೇ ಪಂದ್ಯದಲ್ಲಿ ಜಯ ದಾಖಲಿಸಿ ಸೆಮಿಫೈನಲ್‌ ತಲುಪುವ ಕನಸಿನೊಂದಿಗೆ ಭಾರತ ಕಣಕ್ಕಿಳಿದಿದೆ. ಈಗಾಗಲೇ ಇಂಗ್ಲೆಂಡ್‌, ವೆಸ್ಟ್‌ಇಂಡೀಸ್‌, ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳನ್ನು ಮಣಿಸಿರುವ ಭಾರತಕ್ಕೆ ದಕ್ಷಿಣ ಆಫ್ರಿಕಾ ತಂಡ ಕಠಿಣ ಸವಾಲು ಎನಿಸದು.

ಪಾಯಿಂಟ್ಸ್ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನ ಗಿಟ್ಟಿಸಿದ್ದರೆ, ದಕ್ಷಿಣ ಆಫ್ರಿಕಾ ತಂಡ ಐದನೇ ಸ್ಥಾನದಲ್ಲಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲೂ ಭಾರತ ತಂಡ ಸಮಾನ ಲಯದೊಂದಿಗೆ ಆಡಿದೆ. ಮೊದಲ ಎರಡು ಪಂದ್ಯಗಳಲ್ಲಿ ಮಿಂಚಿದ್ದ ಸ್ಮೃತಿ ಮಂದಾನ ಹಿಂದಿನ ಎರಡು ಪಂದ್ಯಗಳಲ್ಲಿ ಆಡಿಲ್ಲ.ನಾಲ್ಕು ಪಂದ್ಯಗಳಿಂದ 178 ರನ್‌ ಕಲೆಹಾಕಿರುವ ಮಿಥಾಲಿ ರಾಜ್ ಸ್ಥಿರ ಸಾಮರ್ಥ್ಯ ತೋರಿದ್ದಾರೆ. ಪೂನಮ್ ರಾವುತ್ ಹಾಗೂ ದೀಪ್ತಿ ಶರ್ಮಾ ಮಿಂಚುವ ಗುಣ ಹೊಂದಿದ್ದಾರೆ.

ಏಕ್ತಾ ಬಿಷ್ಠ್‌ ಬೌಲಿಂಗ್‌ನಲ್ಲಿ ಭಾರತದ ಪ್ರಮುಖ ಭರವಸೆ ಎನಿಸಿದ್ದಾರೆ. ದೀಪ್ತಿ ಶರ್ಮಾ, ಪೂನಮ್ ಯಾದವ್ ವಿಕೆಟ್ ಉರುಳಿಸುವ ಸಾಮರ್ಥ್ಯ ಹೊಂದಿದ್ದಾರೆ. ಅನುಭವಿ ಜೂಲನ್ ಗೋಸ್ವಾಮಿ ಅವರ ಬೆಂಬಲ ತಂಡಕ್ಕಿದೆ. 

ದಕ್ಷಿಣ ಆಫ್ರಿಕಾ ತಂಡ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡರಲ್ಲಿ ಜಯ ಗಳಿಸಿದೆ. ಒಂದು ಪಂದ್ಯ ಸೋತಿದೆ (ಒಂದು ಪಂದ್ಯ ಫಲಿತಾಂಶ ಇಲ್ಲ).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT