ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಹುಷಾರ್‌

Last Updated 8 ಜುಲೈ 2017, 10:00 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನವು ಕೆಲವು ಸಂಘಟನೆಗಳಿಂದ ನಡೆಯುತ್ತಿದೆ. ಅದನ್ನು ವ್ಯವಸ್ಥಿತವಾಗಿ ಮಟ್ಟ ಹಾಕುವುದಕ್ಕೆ ಸರ್ಕಾರ ಎಲ್ಲ ಕ್ರಮ ತೆಗೆದುಕೊಳ್ಳಲಿದೆ. ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳು ಅಂತಹ ಕೃತ್ಯಕ್ಕೆ ಮುಂದಾದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದು ಕೊಳ್ಳುವುದು ಖಚಿತ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಖಡಕ್‌ ಎಚ್ಚರಿಕೆ ನೀಡಿದರು.

ಮಂಗಳೂರಿನಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
‘ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಶಾಂತಿ ಕದಡುವ ಘಟನೆಗಳು ನಡೆಯುತ್ತಿವೆ. ಅದನ್ನು ಯಾವುದೇ ಕಾರಣಕ್ಕೂ ಸಹಿಸಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಜಬಾಬ್ದಾರಿ ಸರ್ಕಾರದ್ದು, ಶಾಂತಿ ಕದಡುವ ಪ್ರಯತ್ನ ಮಾಡುವ ದುಷ್ಟಶಕ್ತಿಗಳ ವಿರುದ್ಧ ಕಠಿಣ ಕ್ರಮ ಖಂಡಿತ’ ಎಂದು ಅವರು ಹೇಳಿದರು.

ಸಚಿವ ಸಂಪುಟದಲ್ಲಿ ಬಾಕಿ ಉಳಿದಿರುವ ಸಚಿವ ಸ್ಥಾನಗಳನ್ನು ತುಂಬುವ ಕಾರ್ಯವು ಶೀಘ್ರವೇ ನಡೆಯಲಿದೆ. ಸುಪ್ರೀಂ ಕೋರ್ಟ್‌ ಆದೇಶದಂತೆ ರಾಜ್ಯ ಹೆದ್ದಾರಿಯಲ್ಲಿ ಇರುವ ಮದ್ಯದ ಅಂಗಡಿಗಳನ್ನು ಮಾತ್ರ ರಾಜ್ಯ ಸರ್ಕಾರ ಡಿನೋಟಿಫೈ ಮಾಡಲಿದ್ದು, ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಬರುವ ಅಂಗಡಿ ಗಳನ್ನು ಡಿನೋಟಿಫೈ ಮಾಡುವ ಅಧಿ ಕಾರ ನಮಗೆ ಇಲ್ಲ ಎಂದು ಅವರು ಹೇಳಿದರು.

ಕೆಪಿಸಿಸಿ ರಾಜ್ಯ ಘಟಕದ ಅಧ್ಯಕ್ಷ ಡಾ. ಜಿ. ಪರಮೇಶ್ವರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಿ. ವೇಣುಗೋಪಾಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಚಿವ ಬಿ.ರಮಾನಾಥ ರೈ, ಸರ್ಕಾರದ ಮುಖ್ಯ ಸಚೇತಕ ಐವನ್‌ ಡಿಸೋಜ, ಶಾಸಕ ಜೆ.ಆರ್‌. ಲೋಬೊ ಇದ್ದರು.

* * 

ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನವು ನಡೆಯುತ್ತಿದೆ. ಅದನ್ನು ಯಾವ ರೀತಿಯಾಗಿ ನಿಯಂತ್ರಣಕ್ಕೆ ತರಬೇಕು ಎಂಬುದು ಗೊತ್ತಿದೆ.
ಸಿದ್ದರಾಮಯ್ಯ
ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT