ಶನಿವಾರ, ಡಿಸೆಂಬರ್ 7, 2019
25 °C

'ತಪ್ಪು ಮಾಡಿದವರು ಯಾರೇ ಇರಲಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಆದೇಶಿಸಿದ್ದೇವೆ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

'ತಪ್ಪು ಮಾಡಿದವರು ಯಾರೇ ಇರಲಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಆದೇಶಿಸಿದ್ದೇವೆ'

ಬೆಂಗಳೂರು: ಬಂಟ್ವಾಳದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಮಡಿವಾಳ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಪ್ಪು ಮಾಡಿದವರು ಯಾರೇ ಇರಲಿ, ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಆದೇಶಿಸಿದ್ದೇವೆ ಎಂದು ಹೇಳಿದ್ದಾರೆ.

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರಿಗೆ ಮತ್ತು ಕಾನೂನು ಉಲ್ಲಂಘನೆ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡುವುದಿಲ್ಲ. ಹಾಗೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದಿದ್ದಾರೆ.

ತಪ್ಪು ಯಾರದ್ದೇ ಆಗಲಿ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)